ವಾಶ್ರೂಂನಿಂದ ಹೊರಬರುತ್ತಿದ್ದಂತೆ ಮಚ್ಚಿನಿಂದ ಕೊಚ್ಚಿ ಯುವಕನ ಕೊಲೆ: ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಹಾಸನದಲ್ಲಿ ಬೇಕರಿ ಕೆಲಸ ಮಾಡಿಕೊಂಡಿದ್ದ ಯುವಕನ ಬರ್ಬರ ಕೊಲೆ ನಡೆದಿದೆ. ಬೇಲೂರು ಬಸ್ ನಿಲ್ದಾಣದ ಶೌಚಾಲಯದ ಬಳಿ ಬೆಳಗ್ಗೆ 10:30ರ ಸುಮಾರಿಗೆ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿಡಿಯೋ ನೋಡಿ.
ಹಾಸನ, ಅಕ್ಟೋಬರ್ 27: ವೈಯಕ್ತಿಕ ದ್ವೇಷ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಗಿರೀಶ್(22) ಕೊಲೆಯಾದ ಯುವಕ. ಕೊಲೆಗೈದು ಅಜ್ಜೇನಹಳ್ಳಿಯ ನಿವಾಸಿ ಶ್ರೀನಿವಾಸ್ ಎಸ್ಕೇಪ್ ಆಗಿದ್ದಾನೆ. ಬೇಲೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಸ್ಥಳೀಯರೊಬ್ಬರು ಟಿವಿ9 ಜೊತೆಗೆ ಮಾತನಾಡಿದ್ದು, ಕೊಲೆಯಾದ ಯುವಕ ಬೇಕರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಕೊಲೆ ಮಾಡುವಂತಹ ದ್ವೇಷ ಏನಿತ್ತು ಗೊತ್ತಿಲ್ಲ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
