ಹಾಸನ ದುರಂತ; ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ
ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ಟ್ರಕ್ ಅಪಘಾತ ಸಂಭವಿಸಿದೆ. ಈ ಘನಘೋರ ದುರಂತದಲ್ಲಿ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದ ಮಿಥುನ್ (22) ಮೃತ ವಿದ್ಯಾರ್ಥಿ. ಈ ದುರಂತದಲ್ಲಿ ಈವರೆಗೆ 9 ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿರುವ ಘನಘೋರ ದುರಂತ ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿಯಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದ 22 ವರ್ಷ ವಯಸ್ಸಿನ ಮಿಥುನ್ ತನ್ನ ಬರ್ತ್ ಡೇ ದಿನವೇ ಸಾವನ್ನಪ್ಪಿದ್ದಾನೆ. ಈ ದುರಂತದಲ್ಲಿ ಈವರೆಗೆ 9 ಜನರು ಸಾವನ್ನಪ್ಪಿದ್ದು, ಮೃತರಲ್ಲಿ ಯುವಕರೇ ಹೆಚ್ಚಿದ್ದಾರೆ. 20 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
