ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ: ಏಳನೇ ದಿನವೂ ಸಾವಿರಾರು ಭಕ್ತರು, ಧರ್ಮ ದರ್ಶನದ ಸಮಯ ವಿಸ್ತರಣೆ

Edited By:

Updated on: Nov 05, 2026 | 11:31 AM

ಹಾಸನಾಂಬೆ ದೇವಿಯ ದರ್ಶನಕ್ಕೆ ಏಳನೇ ದಿನವೂ ಸಾವಿರಾರು ಭಕ್ತರು ಆಗಮಿಸಿದ್ದು, ಧರ್ಮ ದರ್ಶನದ ಸರತಿ ಸಾಲಿನಲ್ಲಿ ಭಕ್ತರ ದಟ್ಟಣೆ ಕಂಡುಬಂದಿದೆ. ರಾತ್ರಿ ಅಲಂಕಾರ ಮತ್ತು ನೈವೇದ್ಯಕ್ಕಾಗಿ ಬಂದ್ ಆಗಿದ್ದ ಗರ್ಭಗುಡಿ ಬೆಳಗ್ಗೆ 6 ಗಂಟೆಗೆ ತೆರೆದಿದ್ದು, ಮಧ್ಯಾಹ್ನ 2ರಿಂದ 3.30ರವರೆಗೆ ಮತ್ತೆ ದರ್ಶನ ಸ್ಥಗಿತಗೊಳ್ಳಲಿದೆ.

ಹಾಸನ, ನವೆಂಬರ್ 5: ಹಾಸನಾಂಬೆ ದೇವಿಯ ದರ್ಶನಕ್ಕೆ ಏಳನೇ ದಿನವೂ ಭಕ್ತಸಾಗರ ಹರಿದುಬಂದಿದೆ. ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ಧರ್ಮ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದು, ವಿಶೇಷ ದರ್ಶನದ ಸಾಲುಗಳಲ್ಲಿಯೂ ಭಕ್ತರ ದಂಡು ಕಂಡುಬಂದಿದೆ. ರಾತ್ರಿ ದೇವಿಗೆ ನೈವೇದ್ಯ ಹಾಗೂ ಅಲಂಕಾರಕ್ಕಾಗಿ ಗರ್ಭಗುಡಿಯ ಬಾಗಿಲು ಮುಚ್ಚಲಾಗಿತ್ತು. ಮಧ್ಯರಾತ್ರಿ 12.30ರಿಂದ ಬೆಳಗ್ಗೆ 6 ಗಂಟೆಯವರೆಗೆ ಗರ್ಭಗುಡಿ ಬಂದ್ ಆಗಿದ್ದ ಹಿನ್ನೆಲೆಯಲ್ಲಿ, ದೇವಿ ದರ್ಶನಕ್ಕಾಗಿ ಭಕ್ತರು ರಾತ್ರಿಯಿಂದಲೇ ಕಾದು ನಿಂತಿದ್ದರು.

ಅಲಂಕಾರ ಮತ್ತು ನೈವೇದ್ಯದ ಕಾರ್ಯಗಳು ಪೂರ್ಣಗೊಂಡ ಬಳಿಕ ಇಂದು ಬೆಳಗ್ಗೆ 6 ಗಂಟೆಯಿಂದ ಹಾಸನಾಂಬೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾತ್ರಿಯಿಂದ ಸರತಿ ಸಾಲಿನಲ್ಲಿ ಕಾದು ನಿಂತಿದ್ದ ಭಕ್ತರು ಇದೀಗ ಕ್ರಮವಾಗಿ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಭಕ್ತರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಧರ್ಮ ದರ್ಶನದ ಸರತಿ ಸಾಲಿನ ಭಕ್ತರಿಗೆ ದರ್ಶನ ಪಡೆಯುವ ಸಮಯವನ್ನು ವಿಸ್ತರಿಸಲಾಗಿದೆ. ₹1,000 ಮತ್ತು ₹300 ವಿಶೇಷ ದರ್ಶನದ ಸರತಿ ಸಾಲುಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

ಇಂದು (ನವೆಂಬರ್ 5 ರಂದು) ಮಧ್ಯಾಹ್ನ 2 ಗಂಟೆಯಿಂದ 3.30ರವರೆಗೆ ದೇವಿಗೆ ನೈವೇದ್ಯ ಸಲ್ಲಿಸುವ ಹಿನ್ನೆಲೆಯಲ್ಲಿ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ. ಈ ಅವಧಿಯಲ್ಲಿ ದರ್ಶನಕ್ಕೆ ತಾತ್ಕಾಲಿಕವಾಗಿ ಅವಕಾಶ ಇರುವುದಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More