ಹಾಸನಾಂಬೆ ದರ್ಶನೋತ್ಸವಕ್ಕೆ ಇಂದು ತೆರೆ: ಕೊನೆಯ ದಿನದ ದರ್ಶನಕ್ಕೆ ಭಕ್ತರ ಸಾಲು

Edited By:

Updated on: Nov 11, 2026 | 10:00 AM

ಹಾಸನದ ಅಧಿದೇವತೆ ಹಾಸನಾಂಬೆ ದರ್ಶನೋತ್ಸವಕ್ಕೆ ಇಂದು ತೆರೆ ಬೀಳುತ್ತಿದೆ. ಮಧ್ಯಾಹ್ನ 12.30ಕ್ಕೆ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ. ಈ ಬಾರಿ 31 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದು, ಟಿಕೆಟ್ ಮತ್ತು ಲಡ್ಡು ಪ್ರಸಾದ ಮಾರಾಟದಿಂದ 25.36 ಕೋಟಿ ರೂಪಾಯಿ ಮೊತ್ತ ಸಂಗ್ರಹವಾಗಿದೆ.

ಹಾಸನ, ನವೆಂಬರ್ 11: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಶಕ್ತಿದೇವತೆ ಹಾಸನಾಂಬೆಯ ದರ್ಶನೋತ್ಸವಕ್ಕೆ ಇಂದು ತೆರೆ ಬೀಳುತ್ತಿದೆ. ಮಧ್ಯಾಹ್ನ 12.30ಕ್ಕೆ ದೇವಾಲಯದ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಗುತ್ತದೆ. ಕೊನೆಯ ದಿನವಾದ ಇಂದು ದೇವಿಯ ದರ್ಶನ ಪಡೆಯಲು ಭಕ್ತರು ಮುಗಿಬಿದ್ದಿದ್ದಾರೆ. ಬಾಗಿಲು ತೆರೆದ ದಿನದಿಂದ ಕಳೆದ ರಾತ್ರಿ (ನವೆಂಬರ್ 10 ರ ಮಧ್ಯರಾತ್ರಿ) ವರೆಗೆ 31 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಟಿಕೆಟ್ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ ₹25.36 ಕೋಟಿ ಆದಾಯ ಸಂಗ್ರಹವಾಗಿದೆ.

ಇಂದು ದೇವಾಲಯದಲ್ಲಿ ಅರ್ಚಕರು ದೇವಿಗೆ ನೈವೇದ್ಯ ಅರ್ಪಿಸಿ, ಅಲಂಕಾರ ವಿಸರ್ಜನೆ ಪೂಜೆ ನಡೆಸಲಿದ್ದಾರೆ. ಪ್ರಧಾನ ಅರ್ಚಕ ನಾಗರಾಜ್ ಅವರ ನೇತೃತ್ವದಲ್ಲಿ ಈ ಪೂಜಾ ಕೈಂಕರ್ಯ ನೆರವೇರಲಿದೆ. ಪೂಜೆಯ ಬಳಿಕ ದೇವಿಯ ವಿಶ್ವರೂಪ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಆ ಸಮಯದಲ್ಲಿ ಸ್ಥಳದಲ್ಲಿ ಹಾಜರಿರುವ ಗಣ್ಯರು ಹಾಗೂ ಭಕ್ತರಿಗೆ ದರ್ಶನ ಪಡೆಯಲು ಅವಕಾಶವಿರುತ್ತದೆ.

ವಿಶ್ವರೂಪ ದರ್ಶನದ ನಂತರ ಸಿಬ್ಬಂದಿ ಗರ್ಭಗುಡಿಯ ಬಾಗಿಲನ್ನು ಮುಚ್ಚಿ ಸೀಲ್ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರ ಸಮ್ಮುಖದಲ್ಲಿ ದೇವಾಲಯದ ಬಾಗಿಲು ಬಂದ್ ಆಗಲಿದೆ. ಇನ್ನು ಮುಂದಿನ ವರ್ಷ ಆಶ್ವಯುಜ ಮಾಸದಲ್ಲಿ ದೇವಿಯ ದರ್ಶನಕ್ಕೆ ಬಾಗಿಲು ತೆರೆಯಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More