ಹಾಸನಾಂಬೆ ಜಾತ್ರಾಮಹೋತ್ಸವ: ಇಂದು ರಾತ್ರಿ 12ರಿಂದ ಬೆಳಗ್ಗೆ 6ರವರೆಗೆ ದರ್ಶನಕ್ಕೆ ಬ್ರೇಕ್
ಹಾಸನಾಂಬೆ ಉತ್ಸವದ 6ನೇ ದಿನ ಲಕ್ಷಾಂತರ ಭಕ್ತರು ಮತ್ತು ಗಣ್ಯರು ದೇವಿ ದರ್ಶನ ಪಡೆದರು. ನೈವೇದ್ಯ ಮತ್ತು ಅಲಂಕಾರ ಬದಲಾವಣೆ ಹಿನ್ನೆಲೆಯಲ್ಲಿ, ಇಂದು ರಾತ್ರಿ 12 ಗಂಟೆಯಿಂದ ಬೆಳಗ್ಗೆ 6 ಗಂಟೆಯ ತನಕ ದೇವಿಯ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಇದು ಭಕ್ತರ ಗಮನಕ್ಕೆ ತರಲಾಗಿದೆ.
ಹಾಸನ, ನವೆಂಬರ್ 04: ಹಾಸನಾಂಬೆ ಜಾತ್ರಾಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ದೇವಿ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಹಾಸನಾಂಬೆ ದರ್ಶನಕ್ಕೆ ಇನ್ನೂ ಆರು ದಿನ ಮಾತ್ರ ಬಾಕಿ ಇದೆ. ಹೀಗಿರುವಾಗ ಇಂದು ರಾತ್ರಿ ದೇವಾಲಯದ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ದೇವಿಗೆ ನೈವೇದ್ಯವನ್ನು ಸಮರ್ಪಿಸುವ ಹಾಗೂ ವಿಶೇಷ ಅಲಂಕಾರಗಳನ್ನು ಬದಲಾಯಿಸುವ ಹಿನ್ನೆಲೆ, ಇಂದು ರಾತ್ರಿ 12 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಭಕ್ತರಿಗೆ ದರ್ಶನ ಅವಕಾಶವಿಲ್ಲ. ಈ ಅವಧಿಯಲ್ಲಿ ದೇವಿಗೆ ಸಂಬಂಧಿಸಿದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ರಾತ್ರಿ ದರ್ಶನ ಇಲ್ಲದ ಕಾರಣ ಮುಂಜಾನೆ 6 ಗಂಟೆಯಿಂದ ದರ್ಶನಕ್ಕೆ ಆಗಮಿಸುವಂತೆ ಹಾಸನಾಂಬೆ ದೇವಾಲಯ ಆಡಳಿತ ಮಂಡಳಿ ಭಕ್ತರಲ್ಲಿ ಮನವಿ ಮಾಡಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

