ಹಾಸನಾಂಬೆ ಜಾತ್ರಾಮಹೋತ್ಸವ: ಇಂದು ರಾತ್ರಿ 12ರಿಂದ ಬೆಳಗ್ಗೆ 6ರವರೆಗೆ ದರ್ಶನಕ್ಕೆ ಬ್ರೇಕ್

Edited By:

Updated on: Nov 04, 2026 | 10:09 PM

ಹಾಸನಾಂಬೆ ಉತ್ಸವದ 6ನೇ ದಿನ ಲಕ್ಷಾಂತರ ಭಕ್ತರು ಮತ್ತು ಗಣ್ಯರು ದೇವಿ ದರ್ಶನ ಪಡೆದರು. ನೈವೇದ್ಯ ಮತ್ತು ಅಲಂಕಾರ ಬದಲಾವಣೆ ಹಿನ್ನೆಲೆಯಲ್ಲಿ, ಇಂದು ರಾತ್ರಿ 12 ಗಂಟೆಯಿಂದ ಬೆಳಗ್ಗೆ 6 ಗಂಟೆಯ ತನಕ ದೇವಿಯ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಇದು ಭಕ್ತರ ಗಮನಕ್ಕೆ ತರಲಾಗಿದೆ.

ಹಾಸನ, ನವೆಂಬರ್​​ 04: ಹಾಸನಾಂಬೆ ಜಾತ್ರಾಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ದೇವಿ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಹಾಸನಾಂಬೆ ದರ್ಶನಕ್ಕೆ ಇನ್ನೂ ಆರು ದಿನ ಮಾತ್ರ ಬಾಕಿ ಇದೆ. ಹೀಗಿರುವಾಗ ಇಂದು ರಾತ್ರಿ ದೇವಾಲಯದ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ದೇವಿಗೆ ನೈವೇದ್ಯವನ್ನು ಸಮರ್ಪಿಸುವ ಹಾಗೂ ವಿಶೇಷ ಅಲಂಕಾರಗಳನ್ನು ಬದಲಾಯಿಸುವ ಹಿನ್ನೆಲೆ, ಇಂದು ರಾತ್ರಿ 12 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಭಕ್ತರಿಗೆ ದರ್ಶನ ಅವಕಾಶವಿಲ್ಲ. ಈ ಅವಧಿಯಲ್ಲಿ ದೇವಿಗೆ ಸಂಬಂಧಿಸಿದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ರಾತ್ರಿ ದರ್ಶನ ಇಲ್ಲದ ಕಾರಣ ಮುಂಜಾನೆ‌ 6 ಗಂಟೆಯಿಂದ ದರ್ಶನಕ್ಕೆ‌ ಆಗಮಿಸುವಂತೆ ಹಾಸನಾಂಬೆ ದೇವಾಲಯ ಆಡಳಿತ ಮಂಡಳಿ ಭಕ್ತರಲ್ಲಿ ಮನವಿ ಮಾಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More