₹90 ಲಕ್ಷ ಹೂವಿನ ಅಲಂಕಾರ, ₹50 ಲಕ್ಷ ಕಂಟ್ರೋಲ್ ರೂಂ: ಹಾಸನಾಂಬೆ ಜಾತ್ರೆ ಖರ್ಚು ಕೇಳಿ ರೇವಣ್ಣ ಶಾಕ್

Edited By:

Updated on: Oct 15, 2026 | 10:12 AM

ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಹಾಸನಾಂಬೆ ಜಾತ್ರಾ ಮಹೋತ್ಸವದ ಭಾರಿ ವೆಚ್ಚದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೂವಿನ ಅಲಂಕಾರಕ್ಕೆ 90 ಲಕ್ಷ ರೂಪಾಯಿ, ಕಂಟ್ರೋಲ್ ರೂಂಗೆ 50 ಲಕ್ಷ ರೂಪಾಯಿ ವೆಚ್ಚ ಮಾಡುತ್ತಿರುವುದನ್ನು ಪ್ರಶ್ನಿಸಿ, ಬರಗಾಲದ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತ ಹಣ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಹಾಸನ, ಅಕ್ಟೋಬರ್ 15: ಹಾಸನಾಂಬೆ ಜಾತ್ರಾ ಮಹೋತ್ಸವದ ವೆಚ್ಚದ ಕುರಿತು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅ.29ರಿಂದ ನ.11ರವರೆಗೆ ನಡೆಯಲಿರುವ ಈ ಜಾತ್ರಾ ಮಹೋತ್ಸವದ ಖರ್ಚಿನ ವಿವರಗಳನ್ನು ಕೇಳಿ ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಹೂವಿನ ಅಲಂಕಾರಕ್ಕಾಗಿ 90 ಲಕ್ಷ ರೂಪಾಯಿ ಮತ್ತು ಕಂಟ್ರೋಲ್ ರೂಂ ಸ್ಥಾಪನೆಗೆ 50 ಲಕ್ಷ ರೂಪಾಯಿ ವೆಚ್ಚ ಮಾಡುತ್ತಿರುವುದನ್ನು ರೇವಣ್ಣ ಪ್ರಶ್ನಿಸಿದ್ದಾರೆ. ‘ಇದೇನಪ್ಪಾ ಇದು, 90 ಲಕ್ಷ ರೂಪಾಯಿ ತೋಟಗಾರಿಕೆ ಇಲಾಖೆಗೆ ಹೂವಿನ ಅಲಂಕಾರಕ್ಕಾಗಿ. ಕಂಟ್ರೋಲ್ ರೂಂಗೆ 50 ಲಕ್ಷ ರೂಪಾಯಿ’ಎಂದು ಹೇಳಿದ್ದಾರೆ. ಬರಗಾಲದಿಂದ ರೈತರು ತತ್ತರಿಸುತ್ತಿರುವ ಸಂದರ್ಭದಲ್ಲಿ ಇಂತಹ ದೊಡ್ಡ ಮೊತ್ತದ ಹಣವನ್ನು ಅನಗತ್ಯವಾಗಿ ಖರ್ಚು ಮಾಡುತ್ತಿರುವುದು ಸರಿಯಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಭಕ್ತಾದಿಗಳಿಗೆ ಅವಕಾಶ ನೀಡಿದ್ದರೆ, ಅವರೇ ಈ ಖರ್ಚನ್ನು ಭರಿಸುತ್ತಿದ್ದರು ಅಥವಾ ಸ್ಪಾನ್ಸರ್ ಮಾಡುತ್ತಿದ್ದರು. ಜಿಲ್ಲಾಡಳಿತವು ಹಣ ದುರುಪಯೋಗಪಡಿಸಿಕೊಳ್ಳಲು ಜಾತ್ರೆಯನ್ನು ಒಂದು ಅವಕಾಶವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಅವರು ನೇರವಾಗಿ ಆರೋಪಿಸಿದ್ದಾರೆ. ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಈ ಬಗ್ಗೆ ಗಮನ ಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More