ಹಾಸನಾಂಬೆ ದರ್ಶನೋತ್ಸವ: ಸಾರ್ವಜನಿಕ ದರ್ಶನದ ಮೊದಲ ದಿನವೇ ಹರಿದುಬಂದ ಭಕ್ತಸಾಗರ
ಹಾಸನಾಂಬೆ ಸಾರ್ವಜನಿಕ ದರ್ಶನೋತ್ಸವದ ಮೊದಲ ದಿನವೇ ಅಪಾರ ಸಂಖ್ಯೆಯ ಭಕ್ತರು ದೇವಾಲಯಕ್ಕೆ ಆಗಮಿಸಿದ್ದಾರೆ. ರಾತ್ರಿಯಿಂದಲೇ ಕಾದು ನಿಂತಿದ್ದ ಭಕ್ತರು ಬೆಳಿಗ್ಗೆ 6 ಗಂಟೆಯಿಂದ ದರ್ಶನ ಪಡೆಯುತ್ತಿದ್ದಾರೆ. ಎಲ್ಲಾ ಸರತಿ ಸಾಲುಗಳು ಭರ್ತಿಯಾಗಿದ್ದು, ನವೆಂಬರ್ 10ರವರೆಗೆ ದರ್ಶನಕ್ಕೆ ಅವಕಾಶವಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ದರ್ಶನಕ್ಕೆ ಚಾಲನೆ ದೊರೆಯಲಿದೆ.
ಹಾಸನ, ಅಕ್ಟೋಬರ್ 30: ಹಾಸನದಲ್ಲಿ ಹಾಸನಾಂಬೆಯ ಸಾರ್ವಜನಿಕ ದರ್ಶನೋತ್ಸವದ ಮೊದಲ ದಿನವೇ ಬೆಳ್ಳಂಬೆಳಗ್ಗೆಯೇ ಭಕ್ತ ಸಾಗರ ಕಂಡುಬಂದಿದೆ. ದೇಶದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದಾರೆ. ದೇವಾಲಯದ ಆವರಣದಲ್ಲಿ ರಾತ್ರಿಯಿಂದಲೇ ಭಕ್ತರು ಚಳಿಯನ್ನೂ ಲೆಕ್ಕಿಸದೆ ದೇವಿಯ ದರ್ಶನ ಪಡೆಯಲು ಕಾತರದಿಂದ ಕಾಯುತ್ತಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ ಹಾಸನಾಂಬೆ ಸಾರ್ವಜನಿಕ ದರ್ಶನಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ನವೆಂಬರ್ 10 ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ರಾತ್ರಿ ವರೆಗೂ ಭಕ್ತರು ದರ್ಶನ ಪಡೆಯಬಹುದಾಗಿದೆ.
ಶನಿವಾರ ಬೆಳಗ್ಗೆ 6 ಗಂಟೆಯಿಂದ ದಿನದ 24 ಗಂಟೆಗಳ ಕಾಲವೂ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಭಕ್ತರ ಸಂಖ್ಯೆ ಅಪಾರವಾಗಿದ್ದು, ಸುಗಮ ದರ್ಶನಕ್ಕಾಗಿ ಆಡಳಿತ ಮಂಡಳಿ ವ್ಯಾಪಕ ಸಿದ್ಧತೆಗಳನ್ನು ಕೈಗೊಂಡಿದೆ. ಪೊಲೀಸ್ ಬಂದೋಬಸ್ತ್ ಸಹ ನಿಯೋಜಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

