Hasanamba Utsava 2026: ಐದನೇ ದಿನವೂ ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ: ಕಿಲೋಮೀಟರ್‌ಗಟ್ಟಲೆ ಸರದಿ ಸಾಲು

Edited By:

Updated on: Nov 03, 2026 | 9:57 AM

ಹಾಸನಾಂಬ ಉತ್ಸವ 2026: ಐತಿಹಾಸಿಕ ಹಾಸನಾಂಬೆ ದೇವಿಯ ದರ್ಶನಕ್ಕೆ ಐದನೇ ದಿನವೂ ಭಕ್ತಸಾಗರ ಹರಿದುಬಂದಿದೆ. ಮಂಗಳವಾರ ಮುಂಜಾನೆಯಿಂದಲೇ ಧರ್ಮದರ್ಶನದ ಸರದಿ ಕಿಲೋಮೀಟರ್‌ಗಟ್ಟಲೆ ವಿಸ್ತರಿಸಿದ್ದು, ನಾಲ್ಕು ದಿನಗಳಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದಾರೆ. ದೂರದ ಊರುಗಳಿಂದಲೂ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಈಗಾಗಲೇ ಕೋಟ್ಯಂತರ ರೂಪಾಯಿ ಆದಯಾ ಸಹ ದೇಗುಲಕ್ಕೆ ಹರಿದುಬಂದಿದೆ.

ಹಾಸನ, ನವೆಂಬರ್ 3: ಹಾಸನಾಂಬೆ ದೇವಿಯ ದರ್ಶನಕ್ಕೆ ಭಕ್ತರ ಮಹಾಪೂರವೇ ಹರಿದುಬರುತ್ತಿದೆ. ಸಾರ್ವಜನಿಕ ದರ್ಶನದ ಐದನೇ ದಿನವಾದ ಮಂಗಳವಾರವೂ ದೇವಿಯ ದರ್ಶನ ಪಡೆಯಲು ಸಾವಿರಾರು ಭಕ್ತರು ಆಗಮಿಸಿದ್ದಾರೆ. ಮುಂಜಾನೆಯಿಂದಲೇ ದೇವಸ್ಥಾನದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದೆ. ಧರ್ಮದರ್ಶನದ ಸರದಿಯಲ್ಲಿ ಭಕ್ತರು ಕಿಲೋಮೀಟರ್‌ಗಟ್ಟಲೆ ನಿಂತು ದೇವಿಯ ದರ್ಶನಕ್ಕಾಗಿ ಕಾಯುತ್ತಿದ್ದಾರೆ. ಬೆಳಗ್ಗಿನಿಂದಲೇ ಸರದಿ ಸಾಲುಗಳು ತುಂಬಿ ತುಳುಕುತ್ತಿದ್ದು, ಭಕ್ತರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಕಳೆದ ನಾಲ್ಕು ದಿನಗಳಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 03, 2026 08:50 AM
Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More