ಹಾಸನಾಂಬೆ ದರ್ಶನೋತ್ಸವ; 300 ರೂ. ಮತ್ತು 1,000 ರೂ. ಬೆಲೆಯ ವಿಶೇಷ ಟಿಕೆಟ್ ವ್ಯವಸ್ಥೆ

Updated on: Oct 30, 2026 | 12:08 PM

ಹಾಸನಾಂಬೆ ದೇವಾಲಯದಲ್ಲಿ ಸಾರ್ವಜನಿಕ ದರ್ಶನ ಆರಂಭವಾಗಿದೆ. ನವೆಂಬರ್ 10ರವರೆಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದಲೇ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ. ₹300 ಮತ್ತು ₹1,000 ಬೆಲೆಯ ವಿಶೇಷ ದರ್ಶನ ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, ಭದ್ರತೆಗಾಗಿ 2,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಹಾಸನ, ಅಕ್ಟೋಬರ್ 30: ಹಾಸನದ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಾಲಯದಲ್ಲಿ ಸಾರ್ವಜನಿಕ ದರ್ಶನವು ಇಂದು ಶುಕ್ರವಾರದಿಂದ ಆರಂಭವಾಗಿದೆ. ನವೆಂಬರ್ 10ರವರೆಗೆ ಭಕ್ತರಿಗೆ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದಲೇ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಮೊದಲ ದಿನವೇ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ದೇವಿಯ ಆಶೀರ್ವಾದ ಪಡೆದರು.

ದರ್ಶನಕ್ಕಾಗಿ 300 ರೂ. ಮತ್ತು 1,000 ರೂ. ಬೆಲೆಯ ವಿಶೇಷ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಆನ್‌ಲೈನ್‌ನಲ್ಲಿ ಗೋಲ್ಡ್ ಪಾಸ್ ಟಿಕೆಟ್‌ಗಳನ್ನು ಬುಕ್ ಮಾಡಿಕೊಂಡು ಬರುವ ಭಕ್ತರಿಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಮಳೆಯಿಂದ ಭಕ್ತರು ರಕ್ಷಣೆ ಪಡೆಯಲು ಟೆಂಟ್‌ಗಳನ್ನು ಹಾಕಲಾಗಿದ್ದು, ಜಿಲ್ಲಾಡಳಿತ ಪ್ರಸಾದ ವ್ಯವಸ್ಥೆ ಮಾಡಿದೆ. ಯಾವುದೇ ನೂಕುನುಗ್ಗಲು ಉಂಟಾಗದಂತೆ 2,000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಇಂದಿನಿಂದ 12 ದಿನಗಳ ಕಾಲ ನಡೆಯುವ ದರ್ಶನೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 30, 2026 12:02 PM
Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More