AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ

ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ

ಮಂಜುನಾಥ ಕೆಬಿ
| Edited By: |

Updated on: Oct 13, 2026 | 3:56 PM

Share

ಕಳೆದ ವರ್ಷದ ಹಾಸನಾಂಬೆ ಉತ್ಸವದಲ್ಲಿ ಕೋಟಿಗಟ್ಟಲೆ ಹಣ ದುರುಪಯೋಗವಾಗಿರುವ ಬಗ್ಗೆ ವಕೀಲ ದೇವರಾಜೇಗೌಡ RTI ದಾಖಲೆಗಳನ್ನು ಆಧರಿಸಿ ಗಂಭೀರ ಆರೋಪ ಮಾಡಿದ್ದಾರೆ. 14 ದಿನಗಳ ಉತ್ಸವಕ್ಕೆ 15 ಕೋಟಿಗೂ ಹೆಚ್ಚು ಖರ್ಚು ಮಾಡಿ, ಅದರಲ್ಲಿ 9 ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿದೆ ಎನ್ನಲಾಗಿದೆ. ಪ್ರಸಾದ, ಟೆಂಟ್, ಲೈಟಿಂಗ್‌ಗೆ ಅತಿಯಾದ ಬಿಲ್‌ ಮಾಡಲಾಗಿದ್ದು, ಕಿಕ್‌ಬ್ಯಾಕ್ ಆರೋಪಿಸಲಾಗಿದೆ. ಜಿಲ್ಲಾಧಿಕಾರಿ ವಿರುದ್ಧವೂ ಆರೋಪಗಳಿದ್ದು, ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ.

ಹಾಸನ, ಅ.13: ಕಳೆದ ವರ್ಷ ನಡೆದ ಪ್ರಸಿದ್ಧ ಹಾಸನಾಂಬೆ ಉತ್ಸವದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ವಕೀಲ ಹಾಗೂ ಹಾಸನ, ಅ.13: ಹಾಸನಾಂಬೆ ಉತ್ಸವದ ಬಗ್ಗೆ ಇದೀಗ ಭಾರೀ ಚರ್ಚೆಗಳು ನಡೆಯುತ್ತಿದೆ. ಇತ್ತಿಚೆಗೆ ಹಾಸನ ಉಸ್ತುವರಿ ಸಚಿವ ಸಭೆಯನ್ನು ನಡೆಸಿ ಈ ಬಾರಿ ಹೆಚ್ಚು ದುಂದುವೆಚ್ಚ ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ ಕಳೆದ ವರ್ಷ ನಡೆದ ಪ್ರಸಿದ್ಧ ಹಾಸನಾಂಬೆ ಉತ್ಸವದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಮಾಹಿತಿ ಹಕ್ಕಿನಡಿ (RTI) ದಾಖಲೆಗಳನ್ನು ಪಡೆದು ಸುದ್ದಿಗೋಷ್ಠಿ ನಡೆಸಿರುವ ಅವರು, ಜನರ ಹಣವನ್ನು ದುಂದುವೆಚ್ಚ ಮಾಡಲಾಗಿದೆ ಎಂದು ದೂರಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಮಾಹಿತಿ ಹಕ್ಕಿನ ದಾಖಲೆಗಳ ಪ್ರಕಾರ, 14 ದಿನಗಳ ಕಾಲ ನಡೆದ ಹಾಸನಾಂಬೆ ಉತ್ಸವಕ್ಕೆ ಬರೋಬ್ಬರಿ 15 ಕೋಟಿ ರೂಪತಿಗೂ ಅಧಿಕ ಹಣ ಖರ್ಚು ಮಾಡಲಾಗಿದ್ದು, ಅದರಲ್ಲಿ 9 ಕೋಟಿ ರೂಪತಿಗೂ ಹೆಚ್ಚಿನ ಮೊತ್ತದ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಉದ್ಘಾಟನಾ ದಿನದಂದು ಯಾವುದೇ ಸಾಂಸ್ಕೃತಿಕ ಚಟುವಟಿಕೆಗಳು ನಡೆಯದಿದ್ದರೂ ಸಹ ಅದಕ್ಕಾಗಿ 25 ಲಕ್ಷ ರೂ. ಬಿಲ್ ಮಾಡಲಾಗಿದೆ. ಲಡ್ಡು ಪ್ರಸಾದ ವಿತರಣೆಗೆ 99.75 ಲಕ್ಷ ರೂ. ಹಾಗೂ ದೋನ್ನೆ ಪ್ರಸಾದಕ್ಕಾಗಿ 85 ಲಕ್ಷ ರೂ. ವೆಚ್ಚ ಮಾಡಲಾಗಿದೆ ಎಂದು ತೋರಿಸಲಾಗಿದೆ. ಸರತಿ ಸಾಲಿನ ಬ್ಯಾರಿಕೇಡ್, ಜರ್ಮನ್ ಟೆಂಟ್, ಮ್ಯಾಟ್ ಹಾಗೂ ಫ್ಯಾನ್‌ಗಳಿಗಾಗಿ 98 ಲಕ್ಷ ರೂ., ಶಾಮಿಯಾನ, ಎಲ್‌ಇಡಿ ಹಾಗೂ ಮೈಕ್ ವ್ಯವಸ್ಥೆಗೆ 50 ಲಕ್ಷ ರೂ. ಹಾಗೂ ನಗರದಲ್ಲಿ ಲೈಟಿಂಗ್ ವ್ಯವಸ್ಥೆಗಾಗಿ 80 ಲಕ್ಷ ರೂ. ಖರ್ಚು ಮಾಡಲಾಗಿದೆ. ತಾತ್ಕಾಲಿಕ ಶೌಚಾಲಯ ನಿರ್ಮಾಣ ಹಾಗೂ ವಾರ್ ರೂಂ ನಿರ್ಮಾಣಕ್ಕೆ ತಲಾ 60 ಲಕ್ಷ ರೂ. ವೆಚ್ಚ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿದೆ. ಅಗತ್ಯಕ್ಕಿಂತ ಹೆಚ್ಚಿನ ಹಣವನ್ನು ಮನಬಂದಂತೆ ಖರ್ಚು ಮಾಡಲಾಗಿದೆ ಎಂದು ಆರೋಪಿಸಿರುವ ದೇವರಾಜೇಗೌಡ, ಗುತ್ತಿಗೆದಾರರಿಗೆ ಬಿಲ್ ಪಾವತಿಸಿದ ಬಳಿಕ ಕಿಕ್‌ಬ್ಯಾಕ್ ಪಡೆಯಲಾಗಿದೆ ಎಂದು ದೂರಿದ್ದಾರೆ. ಹೊಸ ಕಾರುಗಳು, ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಬೆಲೆಬಾಳುವ ಪೀಠೋಪಕರಣಗಳನ್ನು ಖರೀದಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ, ಹಿಂದಿನ ಉಪವಿಭಾಗಾಧಿಕಾರಿ ಹಾಗೂ ಈಗಿನ ಉಪವಿಭಾಗಾಧಿಕಾರಿಗಳ ವಿರುದ್ಧ ಈ ಆರೋಪಗಳನ್ನು ಮಾಡಲಾಗಿದೆ. ಕಳೆದ ವರ್ಷ ಗುತ್ತಿಗೆ ಪಡೆದಿದ್ದ ವ್ಯಕ್ತಿಯ ಖರ್ಚು-ವೆಚ್ಚದ ಬಿಲ್ ಪಾವತಿಯಾದ ಬಳಿಕದ ಫೋನ್ ಕಾಲ್ ಮಾಹಿತಿಗಳನ್ನು ಪಡೆದು ಸಮಗ್ರ ತನಿಖೆ ನಡೆಸಬೇಕು ಎಂದು ದೇವರಾಜೇಗೌಡ ಆಗ್ರಹಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More