ಹಾಸನಾಂಬ ದರ್ಶನಕ್ಕೆ 4ನೇ ದಿನವೂ ಭಕ್ತರ ಪ್ರವಾಹ

Edited By:

Updated on: Oct 13, 2025 | 10:12 AM

ಹಾಸನಾಂಬ ದೇವಿಯ ದರ್ಶನಕ್ಕೆ 4ನೇ ದಿನವೂ ಭಕ್ತಸಾಗರವೇ ಹರಿದುಬರುತ್ತಿದೆ. ಸಾಮಾನ್ಯ ಸರದಿ ಮೂಲಕ ದೇವಿಯ ದರ್ಶನ ಪಡೆಯುತ್ತಿರುವ ಭಕ್ತರಿಗೆ ಸ್ಥಳೀಯ ಆಡಳಿತ ಹಾಗೂ ದೇವಸ್ಥಾನ ಅಭಿವೃದ್ಧಿ ಸಮಿತಿ ಅಗತ್ಯ ವ್ಯವಸ್ಥೆ ಕಲ್ಪಿಸಿದೆ. ಹಾಸನಾಂಬೆ ದೇವಾಲಯದ ಸುತ್ತಮುತ್ತ ಭದ್ರತೆ ಬಿಗಿಗೊಳಿಸಲಾಗಿದ್ದು, ದೇವಿ ದರ್ಶನದ ಸಂದರ್ಭದಲ್ಲಿ ಯಾವುದೇ ಅಸೌಕರ್ಯ ಉಂಟಾಗದಂತೆ ಪೊಲೀಸ್ ಇಲಾಖೆಯು ನಿಯಂತ್ರಣ ವ್ಯವಸ್ಥೆ ಕೈಗೊಂಡಿದೆ.

ಹಾಸನ, ಅಕ್ಟೋಬರ್ 13: ಹಾಸನದ ಹಾಸನಾಂಬ ದೇವಾಲಯದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಂದು ನಾಲ್ಕನೇ ದಿನವಾಗಿದ್ದು, ದೇವಿಯ ದರ್ಶನಕ್ಕಾಗಿ ಭಕ್ತರ ದಂಡೇ ಹರಿದು ಬರುತ್ತಿದೆ. ಮುಂಜಾನೆಯಿಂದಲೇ ಸಾವಿರಾರು ಮಂದಿ ಭಕ್ತರು ದೇವಾಲಯದತ್ತ ಧಾವಿಸಿದ್ದು, ಭಕ್ತಿ ಭಾವದಿಂದ ಹಾಸನಾಂಬೆ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರಿಗೆ ದರ್ಶನ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 2ರಿಂದ 3.30ರವರೆಗೆ ನೈವೇದ್ಯ ಸಮಯದ ನಿಮಿತ್ತ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಬಳಿಕ ಮಧ್ಯಾಹ್ನ 3.30ರಿಂದ ನಾಳೆ ಮುಂಜಾನೆ 3ರವರೆಗೆ ಮತ್ತೆ ದರ್ಶನ ಇರಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ