ಹಾಸನದ ಹಾಸನಾಂಬೆ ದೇವಿ ಉತ್ಸವಕ್ಕೆ ವಿಧ್ಯುಕ್ತ ತೆರೆ: ಗರ್ಭಗುಡಿ ಬಾಗಿಲು ಬಂದ್
ಹಾಸನದ ಹಾಸನಾಂಬೆ ದೇವಿ ಉತ್ಸವ ಇಂದು ಸಂಪನ್ನಗೊಂಡಿದೆ. 11 ದಿನಗಳ ಉತ್ಸವದಲ್ಲಿ 9 ದಿನಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ದಾಖಲೆಯ 18 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಮಧ್ಯಾಹ್ನ 12.33ಕ್ಕೆ ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ.
ಹಾಸನದ ಹಾಸನಾಂಬೆ (Hasanaamba) ದೇವಿ ಉತ್ಸವಕ್ಕೆ ಇಂದು ವಿಧ್ಯುಕ್ತ ತೆರೆ ಎಳೆಯಲಾಗಿದೆ. ದೇವಿಯ ಅಲಂಕಾರ ಆಭರಣ ತೆರವು ಮಾಡಿ ಪೂಜೆ ಮಾಡಲಾಗಿದೆ. ವಿಶ್ವರೂಪ ದರ್ಶನದ ಬಳಿಕ ಅರ್ಚಕರು ಹೊರಬಂದರು. ಬಳಿಕ ಮಧ್ಯಾಹ್ನ 12.33ಕ್ಕೆ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್ ಮಾಡಲಾಗಿದೆ. ಆ ಮೂಲಕ ಈ ವರ್ಷದ 11 ದಿನಗಳ ಉತ್ಸವ ಸಂಪನ್ನವಾಗಿದೆ. 9 ದಿನ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ದಾಖಲೆಯ 18 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos