ನಾನು ದೂರು ದಾಖಲಿಸಿರುವ ಎಲ್ಲ ಪ್ರಕರಣಗಳ ಕಾಗದಪತ್ರಗಳನ್ನು ಈಡಿ ವಿಚಾರಣೆಗೆ ತಂದಿದ್ದೇನೆ: ಗಂಗರಾಜು

ಅರುಣ್​ ಕುಮಾರ್​ ಬೆಳ್ಳಿ

Updated on: Oct 28, 2024 | 5:27 PM

ತನ್ನ ದೂರಿನಲ್ಲಿ ಉಲ್ಲೇಖವಾಗಿರುವ ಮಂಜುನಾಥ್ ಬಗ್ಗೆ ಬೆಳಕು ಚೆಲ್ಲಿದ ಗಂಗರಾಜು, ಮುಖ್ಯಮಂತ್ರಿ ಸಿದ್ದರಾಮಯ್ಯ, ಯತೀಂದ್ರ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್​ಗೆ ಪರಮಾಪ್ತರಾಗಿರುವ ಮಂಜುನಾಥ ಒಬ್ಬ ಡೆವಲಪರ್, ಮುಡಾದಿಂದ 50:50ಅನುಪಾತದಲ್ಲಿ ಅಲಾಟ್ ಆಗಿರುವ ನಿವೇಶನಗಳಲ್ಲಿ ಅತಿದೊಡ್ಡ ಫಲಾನುಭವಿ ಅವರೇ ಎಂದರು.

ಬೆಂಗಳೂರು: ಮುಡಾ ಹಗರಣವನ್ನು ಬಯಲಿಗೆಳೆದಿರುವ ಸಾಮಾಜಿಕ ಕಾರ್ಯಕರ್ತ ಗಂಗರಾಜು ಇಂದು ಈಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು. ಕಚೇರಿಯೊಳಗೆ ಹೋಗುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದಿಂದ ತನಗೆ ನೋಟೀಸ್ ಬಂದಿದೆ, ನಿರ್ದಿಷ್ಟವಾಗಿ ಯಾವ ಪ್ರಕರಣದ ವಿಚಾರಣೆ ಅಂತ ನೋಟೀಸ್​ನಲ್ಲಿ ಉಲ್ಲೇಖವಾಗಿಲ್ಲ; ಹಾಗಾಗಿ, ಮುಡಾ ಸೇರಿದಂತೆ ತಾನು ದಾಖಲಿಸಿರುವ ಎಲ್ಲ ದೂರುಗಳ ಪ್ರಕರಣಗಳಿಗೆ ಸಂಬಂಧಪಟ್ಟ ಕಾಗದಪತ್ರಗಳನ್ನು ತನ್ನೊಂದಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸೈಟುಗಳನ್ನು ಮುಡಾಗೆ ಹಿಂತಿರುಗಿಸುವುದು ಕಳ್ಳನೊಬ್ಬ ಕದ್ದ ಮಾಲನ್ನು ವಾಪಸ್ಸು ಕೊಟ್ಟಂತೆ: ಗಂಗರಾಜು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.