Loading video

ಮಹಾರಾಷ್ಟ್ರದ ಸಾರಿಗೆ ಇಲಾಖೆ ಕಾರ್ಯದರ್ಶಿಯೊಂದಿಗೆ ಮಾತಾಡಲು ನಮ್ಮ ಅಧಿಕಾರಿಗಳಿಗೆ ಹೇಳಿದ್ದೇನೆ: ರಾಮಲಿಂಗಾ ರೆಡ್ಡಿ

|

Updated on: Feb 24, 2025 | 11:20 AM

ಮೊನ್ನೆಯಷ್ಟೇ ಮಹಾರಾಷ್ಟ್ರದ ಸಾರಿಗೆ ಸಚಿವರು ಬೆಂಗಳೂರುಗೆ ಬಂದಿದ್ದರು, ಕಾರ್ಯದರ್ಶಿಗಳ ಮಟ್ಟದಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ತಾನು ಸಚಿವರೊಂದಿಗೆ ಮಾತಾಡುವುದಾಗಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಬಸ್ಸಿನಲ್ಲಿ ನಡೆದಿರುವ ಘಟನೆಗೆ ಭಾಷೆಯ ಬಣ್ಣ ಬಳಿಯುವುದು ಸರಿಯಲ್ಲ, ಆದಷ್ಟು ಬೇಗ ಎಲ್ಲ ಸಮಸ್ಯೆಗಳು ಬಗೆಹಯುವ ನಿರೀಕ್ಷೆ ತನಗಿದೆ ಎಂದು ಸಚಿವ ಹೇಳಿದರು.

ಬೆಳಗಾವಿ: ಮಹಾರಾಷ್ಟ್ರದಲ್ಲಿ ಕೆಎಸ್ಸಾರ್ಟಿಸಿ ಬಸ್ ಮತ್ತು ಸಿಬ್ಬಂದಿ ಮೇಲೆ ಉದ್ಧವ್ ಠಾಕ್ರೆ ಬಣದ ಶಿವಸೇನೆಯ ಗೂಂಡಾಗಳು ತೋರುತ್ತಿರುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆದ ಬಳಿಕ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರದರ್ಶನ ನಡೆಸಿದ್ದಾರೆ, ಅದಾದ ನಂತರ ಶಿವಸೇನೆಯ ಕಾರ್ಯಕರ್ತರು ಪುಣೆ ಮತ್ತು ಮತ್ತು ನೆರೆರಾಜ್ಯದ ಕೆಲಭಾಗಗಳಲ್ಲಿ ಕೆಎಸ್ಸಾರ್ಟಿಸಿ ಬಸ್​ಗಳಿಗ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಇದು ಸರಿಯಲ್ಲ, ಮಹಾರಾಷ್ಟ್ರದ ಸಾರಿಗೆ ಇಲಾಖೆ ಕಾರ್ಯದರ್ಶಿಯವರೊಂದಿಗೆ ಮಾತಾಡುವಂತೆ ತಮ್ಮ ಸಾರಿಗೆ ಇಲಾಖೆ ಕಾರ್ಯದರ್ಶಿಯವರಿಗೆ ಹೇಳಿರುವುದಾಗಿ ರೆಡ್ಡಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಿಸಲ್ಲ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ