ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಮಾಡಿದ ಟೀಕೆಗಳಿಗೆ ಮಹತ್ವ ನೀಡಲ್ಲ: ನಿಖಿಲ್

Updated on: Nov 18, 2024 | 2:23 PM

ರಾಮನಗರ ಮತ್ತು ಚನ್ನಪಟ್ಟಣದ ಜನರ ಜೊತೆ ದೇವೇಗೌಡರು ದಶಕಗಳಿಂದ ಅವಿನಾಭಾವ ಸಂಬಂಧ ಹೊಂದಿದ್ದಾರೆ ಅಂತ ಹೇಳುವಾಗ ನಿಖಿಲ್ ಮತ್ತೊಮ್ಮೆ ವರ್ಷವನ್ನು ತಪ್ಪು ಹೇಳಿದರು. ಚುನಾವಣಾ ಪ್ರಚಾರದಲ್ಲಿ ಅವರು 1983 ರಿಂದ ಚನ್ನಪಟ್ಟಣದೊಂದಿಗೆ ಬಾಂಧವ್ಯ ಹೊಂದಿದ್ದಾರೆ ಎಂದಾಗ ವೇದಿಕೆ ಮೇಲಿದ್ದ ದೇವೇಗೌಡರು 83 ಅಲ್ಲ 73 ಅಂತ ತಿದ್ದಿದ್ದರು!

ಹಾಸನ: ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಮಾಡಿದ ಟೀಕೆ-ಕಾಮೆಂಟ್​ಗಳನ್ನು ತಾನು ಗಂಭೀರವಾಗಿ ಪರಿಗಣಿಸಿಲ್ಲ ಮತ್ತು ಮಹತ್ವವನ್ನೂ ನೀಡಿಲ್ಲ, ಚುನಾವಣೆ ಮುಗಿದಿದೆ ಎನ್ನುವ ಕಾರಣಕ್ಕೆ ಟೀಕೆ ಮಾಡಿದವರನ್ನು ತರಾಟೆಗೆ ತೆಗೆದುಕೊಳ್ಳುವ ಜಾಯಮಾನ ತನ್ನದಲ್ಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದೇವೇಗೌಡರ ಹುಟ್ಟೂರು ಹರದನಹಳ್ಳಿಯಲ್ಲಿ ಮನೆದೇವರಿಗೆ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ ದಂಪತಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More