AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MB Patil: ಅಧಿಕಾರ ಹಂಚಿಕೆ ಇಲ್ಲ ಅಂತ ಕೆಸಿ ವೇಣುಗೋಪಾಲ್ ಹೇಳಿದ್ದನ್ನು ಪುನರುಚ್ಛರಿಸಿದ್ದೇನೆ, ಅಷ್ಟೇ: ಎಂಬಿ ಪಾಟೀಲ್, ಸಚಿವರು

MB Patil: ಅಧಿಕಾರ ಹಂಚಿಕೆ ಇಲ್ಲ ಅಂತ ಕೆಸಿ ವೇಣುಗೋಪಾಲ್ ಹೇಳಿದ್ದನ್ನು ಪುನರುಚ್ಛರಿಸಿದ್ದೇನೆ, ಅಷ್ಟೇ: ಎಂಬಿ ಪಾಟೀಲ್, ಸಚಿವರು

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 23, 2023 | 11:59 AM

Share

ಅಧಿಕಾರ ಹಂಚಿಕೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ನಿನ್ನೆ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಸಚಿವ ಎಂಬಿ ಪಾಟೀಲ್ ಇಂದು ನಗರದಲ್ಲಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದರು.

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) 5 ವರ್ಷಗಳ ಕಾಲ ಮುಂದುವರಿಯುತ್ತಾರೆ, ಅಧಿಕಾರ ಹಂಚಿಕೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ನಿನ್ನೆ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಸಚಿವ ಎಂಬಿ ಪಾಟೀಲ್ (MB Patil) ಇಂದು ನಗರದಲ್ಲಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಮತ್ತು ಉಪ-ಮುಖ್ಯಮಂತ್ರಿಗಳು 5 ವರ್ಷಗಳ ಕಾಲ ಮುಂದುವರಿಯಲಿದ್ದಾರೆ, ಮುಂದಿನ ವರ್ಷ ನಡೆಯುವ ಸಾರ್ವತ್ರಿಕ ಚುನಾವಣೆವರೆಗೆ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (KC Venugopal) ಹೇಳಿದ್ದನ್ನೇ ತಾನು ಪುನರುಚ್ಛರಿಸಿರುವುದಾಗಿ ಪಾಟೀಲ್ ಹೇಳಿದರು. ಈ ವಾಕ್ಯಗಳನ್ನು ಅವರು ಮೂರು ಬಾರಿ ಪುನರಾವರ್ತಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.