Karnataka Assembly Polls; ಎಕ್ಸಿಟ್ ಪೋಲ್ ಬಗ್ಗೆ ನನಗೆ ನಂಬಿಕೆಯಿಲ್ಲ, ಆದರೆ ಕಾಂಗ್ರೆಸ್ ಪಕ್ಷಕ್ಕೆ ನಿಚ್ಚಳ ಬಹುಮತ ಸಿಗೋದು ನಿಶ್ಚಿತ: ಡಿಕೆ ಶಿವಕುಮಾರ್

|

Updated on: May 12, 2023 | 12:54 PM

ಎಕ್ಸಿಟ್ ಪೋಲ್ ನವರು ಕಾಂಗ್ರೆಸ್ ಪಕ್ಷದ ಮೇಲೆ ತೋರಿಸಿರುವ ವಿಶ್ವಾಸಕ್ಕೆ ಧನ್ಯವಾದ ಸಲ್ಲಿಸುವುದಾಗಿ ಶಿವಕುಮಾರ್ ಹೇಳಿದರು.

ಬೆಂಗಳೂರು: ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು (Exit Polls) ಕಾಂಗ್ರೆಸ್ ಪಕ್ಷದ ಪರವಾಗಿ ತೀರ್ಪು ನೀಡಿದ್ದರೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ (DK Shivakumar) ಅವುಗಳ ಬಗ್ಗೆ ನಂಬಿಕೆಯಿಲ್ಲ. ಇಂದು ನಗರದಲ್ಲಿ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತಾಡಿದ ಶಿವಕುಮಾರ್, ತಮ್ಮ ಪಕ್ಷಕ್ಕೆ 141 ಸೀಟು ಸಿಗೋದು ನಿಶ್ಚಿತ, ಯಾವುದೇ ಪಕ್ಷದ ನೆರವಿಲ್ಲದೆ ಕಾಂಗ್ರೆಸ್ (Congress) ಸರ್ಕಾರ ರಚಿಸುತ್ತದೆ ಎಂದು ಹೇಳಿದರು. ತಮ್ಮ ಪಕ್ಷ ನಿಚ್ಚಳವಾದ ಬಹುಮತ ಪಡೆಯುವುದರಲ್ಲಿ ಯಾವುದೇ ಸಂಶಯವಿಲ್ಲ, ಎಕ್ಸಿಟ್ ಪೋಲ್ ನವರು ಕಾಂಗ್ರೆಸ್ ಪಕ್ಷದ ಮೇಲೆ ತೋರಿಸಿರುವ ವಿಶ್ವಾಸಕ್ಕೆ ಧನ್ಯವಾದ ಸಲ್ಲಿಸುವುದಾಗಿ ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ