ಸಿಎಂ ಬಾಮೈದ ನೋಟೀಸ್ ಇಲ್ಲದೆ ಲೋಕಾಯುಕ್ತ ಕಚೇರಿಗೆ ಯಾಕೆ ಹೋಗಿದ್ದರು ಗೊತ್ತಿಲ್ಲ: ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: Nov 20, 2024 | 12:33 PM

ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುವ ಬಗ್ಗೆ ಮಠಾಧೀಶರು ಹೇರುತ್ತಿರುವ ಒತ್ತಡದ ಬಗ್ಗೆ ಪರಮೇಶ್ವರ್ ಅವರ ಗಮನ ಸೆಳೆದಾಗ, ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ಸಂವಿಧಾನದಲ್ಲಿ ನಂಬಿಕೆಯುಳ್ಳವರು ಅದನ್ನು ಸಾರ್ವಜನಿಕಗೊಳಿಸಬೇಕು ಎನ್ನುತ್ತಿದ್ದಾರೆ, ವರದಿಯ ಸಾಧಕ ಬಾಧಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಯನ ಮಾಡುತ್ತಿದ್ದಾರೆ ಎಂದರು.

ಬೆಂಗಳೂರು: ಎರಡು ದಿನಗಳ ಹಿಂದೆ ನಗರದ ಈಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ನಿನ್ನೆ ರಾತ್ರಿ ಏಕಾಏಕಿ ಯಾವುದೇ ನೋಟೀಸ್ ಇಲ್ಲದಿದ್ದರೂ ಮೈಸೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದಾರೆ. ಯಾಕೆ ಅಂಥ ಅವಸರವೇನಿತ್ತು ಅಂತ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಕೇಳಿದರೆ ತನಗೆ ಮಾಹಿತಿ ಇಲ್ಲ ಅಂತ ಹೇಳಿ ಲೋಕಾಯುಕ್ತ ಕಚೇರಿ ಬೀಗ ಹಾಕಿದ್ದಾರೋ ಇಲ್ವೋ ಅಂತ ನೋಡೋಕೆ ಹೋಗಿರಬೇಕು ಎಂದು ನಗಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅಧಿವೇಶನದಲ್ಲಿ ಪ್ರತಿಪಕ್ಷಗಳು ನಡೆಸುವ ದಾಳಿಗೆ ಸನ್ನದ್ಧರಾಗಿರುವಂತೆ ತಿಳಿಸಲು ಸಿಎಂ ಸಭೆ ಕರೆದಿದ್ದರು: ಪರಮೇಶ್ವರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.