ರಮೇಶ್ ಜಾರಕಿಹೊಳಿ ಪ್ರಸ್ತಾಪಿಸಿರುವ ಸಿಡಿಗಳ ಬಗ್ಗೆ ಮಾಹಿತಿ ಇಲ್ಲ, ಆದರೆ ಕಾನೂನು ತನ್ನ ಕೆಲಸ ಮಾಡಲಿದೆ: ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು
ವಿಷಯದ ಬಗ್ಗೆ ತಮ್ಮಲ್ಲಿ ಸ್ಪಷ್ಟ ಮಾಹಿತಿಯಿಲ್ಲ, ಕಾನೂನು ಅನ್ವಯ ಕ್ರಮ ತೆಗೆದುಕೊಳ್ಳಲಾಗುವುದು, ಎಂದು ಮುಖ್ಯಮಂತ್ರಿಗಳು ಹೇಳಿದರು.
ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಅವರು ಎರಡು ದಿನಗಳ ಹಿಂದೆ ಗೋಕಾಕನಲ್ಲಿ ಸುದ್ದಿಗೋಷ್ಟಿಯೊಂದನ್ನು ನಡೆಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar) ವಿರುದ್ಧ ಹಲವಾರು ಅರೋಪಗಳನ್ನು ಮಾಡಿ ತಮ್ಮಲ್ಲಿ ಸಾಕ್ಷ್ಯದ ರೂಪದಲ್ಲಿ ಸಿಡಿಗಳಿವೆ ಅಂತ ಹೇಳಿದ್ದರು. ಯಾವುದೇ ಸಿಡಿಯನ್ನು ಅವರು ಬಿಡುಗಡೆ ಮಾಡಲಿಲ್ಲವಾದರೂ ಅವುಗಳನ್ನು ಸಿಬಿಐ ತನಿಖೆಗೆ ಒಪ್ಪಿಸುವುದಾಗಿ ಹೇಳಿದರು. ಇದೇ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಇಂದು ಮಾಧ್ಯಮದವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಸಿಡಿಗಳನ್ನು ಸಿಬಿಐ ತನಿಖೆಗೆ ಒಪ್ಪಿಸುತ್ತೀರಾ ಅಂತ ಕೇಳಿದಾಗ ಅವರಿಂದ ಸ್ಪಷ್ಟ ಉತ್ತರ ಸಿಗಲಿಲ್ಲ. ವಿಷಯದ ಬಗ್ಗೆ ತಮ್ಮಲ್ಲಿ ಸ್ಪಷ್ಟ ಮಾಹಿತಿಯಿಲ್ಲ, ಕಾನೂನು ಅನ್ವಯ ಕ್ರಮ ತೆಗೆದುಕೊಳ್ಳಲಾಗುವುದು, ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 01, 2023 12:57 PM
Latest Videos