Karnataka Budget Session; ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವ ಪ್ರಸ್ತಾವನೆ ಮುಖ್ಯಮಂತ್ರಿಗೆ ನೀಡಿದ್ದೇವೆ: ಲಕ್ಷ್ಮಿ ಹೆಬ್ಬಾಳ್ಕರ್

|

Updated on: Feb 15, 2024 | 5:24 PM

ರಾಜ್ಯದ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ್ ಅಂಗನವಾಡಿ ಸಕ್ಷಮ ಅಂಗನವಾಡಿಯಾಗಿ ಪರಿವರ್ತಿಸುವ ಉದ್ದೇಶ ತಮಗಿದೆ ಎಂದು ಸಚಿವೆ ಹೇಳಿದರು. ಬಿಜೆಪಿ ನಾಯಕರು ಮಾಡುತ್ತಿರುವ ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಕಾಂಗ್ರೆಸ್ ಸರ್ಕಾರಕ್ಕಿಲ್ಲ ಎಂದ ಲಕ್ಷ್ಮಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ನಾಳೆ ರಾಜ್ಯ ಬಜೆಟ್ ಮಂಡಿಸಲಿದ್ದಾರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರಿಗಿರುವ ನಿರೀಕ್ಷೆಗಳೇನು ಅಂತ ಕೇಳಿದಾಗ, ತಮ್ಮ ಇಲಾಖೆಯ ಗೃಹಲಕ್ಷ್ಮಿ ಯೋಜನೆಯಿಂದ (Gruha Lakshmi Scheme) ರಾಜ್ಯದ ಕೋಟ್ಯಾಂತರ ಮಹಿಳೆಯರಿಗೆ ಪ್ರಯೋಜನವಾಗಿ ಅವರ ಸಬಲೀಕರಣವಾಗುತ್ತಿದೆ, ಹಾಗಾಗಿ ಇಲಾಖೆಯಿಂದ ದೊಡ್ಡ ಬೇಡಿಕೆಯೇನೂ ಇಲ್ಲ ಎಂದು ಹೇಳಿದರು. ಆದರೆ, ಅಂಗನವಾಡಿ ಕೇಂದ್ರಗಳಿಗೆ ಕಟ್ಟಡಗಳನ್ನು ಕೇಳಿದ್ದೇವೆ ಮತ್ತು ಅದಕ್ಕೂ ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೀಡುವ ಗೌರವಧನವನ್ನು ಹೆಚ್ಚಿಸಲು ಬೇಡಿಕೆ ಸಲ್ಲಿಸಲಾಗಿದೆ ಎಂದು ಲಕ್ಷ್ಮಿ ಹೇಳಿದರು. ಅಂಗನವಾಡಿಗಳಿಗೆ ಬರುವ ಮಕ್ಕಳಿಗೆ ಸಮವಸ್ತ್ರದ ಜೊತೆ ಶೂಗಳನ್ನು ನೀಡಬೇಕೆನ್ನುವ ಪ್ರಸ್ತಾಪವನ್ನು ಸಹ ಸಲ್ಲಿಸಿದ್ದೇವೆ ಎಂದು ಹೇಳಿದ ಅವರು ರಾಜ್ಯದ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ್ ಅಂಗನವಾಡಿ ಸಕ್ಷಮ ಅಂಗನವಾಡಿಯಾಗಿ ಪರಿವರ್ತಿಸುವ ಉದ್ದೇಶ ತಮಗಿದೆ ಎಂದರು. ಬಿಜೆಪಿ ನಾಯಕರು ಮಾಡುತ್ತಿರುವ ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಕಾಂಗ್ರೆಸ್ ಸರ್ಕಾರಕ್ಕಿಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್, ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ