ಆಸ್ತಿ ಸುಮ್ಮನೆ ಬಂದಿದ್ದಲ್ಲ, ಕಷ್ಟಪಟ್ಟು ಸಂಪಾದಿಸಿದ್ದೇನೆ, ಅದೆಷ್ಟಿದೆ ಅಂತ ನಂಗಷ್ಟೇ ಗೊತ್ತು: ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Aug 29, 2024 | 7:50 PM

ತಮ್ಮ ವಿರುದ್ಧ ಡಿಎ ಕೇಸನ್ನು ಬಿಎಸ್ ಯಡಿಯೂರಪ್ಪ ಸಿಬಿಐಗೆ ವಹಿಸಿದ್ದರು, ಅದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರ ಸಿಬಿಐ ತನಿಖೆಯ ಅಗತ್ಯವಿಲ್ಲ ಎಂದು ಲೋಕಾಯುಕ್ತಗೆ ವರ್ಗಾಯಿಸಿದ್ದಾರೆ, ಮೊನ್ನೆ ಲೋಕಾಯುಕ್ತ ಅಧಿಕಾರಿಗಳು ಕರೆದ ವಿಚಾರಣೆಗೆ ಹಾಜರಾಗಿದ್ದೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ (ಡಿಎ ಕೇಸ್) ಸಂಬಂಧಿಸಿದಂತೆ ತನ್ನ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ನಿರಾಳರಾಗಿರುವ ಡಿಸಿಎಂ ಡಿಕೆ ಶಿವಕುಮಾರ್, ಇದು ತನಗೆ ಸಂದಿರುವ ಜಯಕ್ಕಿಂತ ಹೆಚ್ಚು ರಾಜ್ಯ ಸರ್ಕಾರಕ್ಕೆ ಸಂದಿರುವ ಗೆಲುವು ಅಂತ ಹೇಳಿದರು. ರಾಜಕಾರಣದಲ್ಲಿ ಶ್ರಮಪಟ್ಟು ಬೆವರು ಸುರಿಸಿ ಆಸ್ತಿ ಸಂಪಾದಿಸಿದ್ದೇನೆ, ಅದೆಷ್ಟಿದೆ ಅಂತ ತನಗೆ ಮಾತ್ರ ಗೊತ್ತು ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಮುಡಾ ಹಗರಣ; ಸಿಎಂ ಸಿದ್ದರಾಮಯ್ಯರಿಂದ ಯಾವ ಪ್ರಮಾದವೂ ಜರುಗಿಲ್ಲ: ಡಿಕೆ ಶಿವಕುಮಾರ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.