AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 ಇಂಪ್ಯಾಕ್ಟ್: ಸರ್ಕಾರಿ ಶಾಲೆಗೆ ಬಿಸಿಯೂಟ ಅಕ್ಕಿ ಪೂರೈಸದ ಪ್ರಕರಣದಲ್ಲಿ ಇಬ್ಬರು ಸಸ್ಪೆಂಡ್

TV9 ಇಂಪ್ಯಾಕ್ಟ್: ಸರ್ಕಾರಿ ಶಾಲೆಗೆ ಬಿಸಿಯೂಟ ಅಕ್ಕಿ ಪೂರೈಸದ ಪ್ರಕರಣದಲ್ಲಿ ಇಬ್ಬರು ಸಸ್ಪೆಂಡ್

ರಮೇಶ್ ಬಿ. ಜವಳಗೇರಾ
|

Updated on: Nov 22, 2026 | 4:29 PM

Share

ಚಳ್ಳಾಳ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಯೂಟಕ್ಕೆ ಅಕ್ಕಿ ಪೂರೈಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯೋಪಾಧ್ಯಾಯ ಮತ್ತು ಅಕ್ಷರದಾಸೋಹ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಚಳ್ಳಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಫ್.ಸಿ.ಬಾಳಿಕಾಯಿ ಹಾಗೂ ಅಕ್ಷರದಾಸೋಹ ಅಧಿಕಾರಿ ಟಿ.ಎಸ್.ಮಳವಳ್ಳಿಯನ್ನ ಅಮಾನತುಗೊಳಿಸಿ ಹಾವೇರಿ ಜಿಲ್ಲಾ ಪಂಚಾಯಿತಿ ಸಿಇಒ ದಲ್ಜತಕುಮಾರ್ ಆದೇಶ ಹೊರಡಿಸಿದ್ದಾರೆ.

ಹಾವೇರಿ, (ನವೆಂಬರ್ 22): ಚಳ್ಳಾಳ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಯೂಟಕ್ಕೆ ಅಕ್ಕಿ ಪೂರೈಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯೋಪಾಧ್ಯಾಯ ಮತ್ತು ಅಕ್ಷರದಾಸೋಹ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಚಳ್ಳಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಫ್.ಸಿ.ಬಾಳಿಕಾಯಿ ಹಾಗೂ ಅಕ್ಷರದಾಸೋಹ ಅಧಿಕಾರಿ ಟಿ.ಎಸ್.ಮಳವಳ್ಳಿಯನ್ನ ಅಮಾನತುಗೊಳಿಸಿ ಹಾವೇರಿ ಜಿಲ್ಲಾ ಪಂಚಾಯಿತಿ ಸಿಇಒ ದಲ್ಜತಕುಮಾರ್ ಆದೇಶ ಹೊರಡಿಸಿದ್ದಾರೆ.

ಸವಣೂರು ತಾಲೂಕಿನ ಚಳ್ಳಾಳ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ 15 ದಿನ ಅಕ್ಕಿ ಪೂರೈಕೆಯಾಗಿಲ್ಲ. ಹೀಗಾಗಿ ಬಿಸಿಯೂಟ ಮಾಡಿರಲಿಲ್ಲ. ಹೀಗಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಗ್ರಾಮಸ್ಥರು ಬಿಸಿಯೂಟ ಅಕ್ಕಿ ವ್ಯವಸ್ಥೆ ಮಾಡಿದ್ದರು. ಇದರಿಂದ ಕರ್ತವ್ಯ ನಿರ್ವಹಣೆ ನಿರ್ಲಕ್ಷ್ಯ ಹಿನ್ನೆಲೆ ಬಿಇಒ ನೋಟಿಸ್ ನೀಡಿದ್ದರು. ಆದ್ರೆ, ನೋಟಿಸ್‌ಗೆ ಇಬ್ಬರು ಅಧಿಕಾರಿಗಳು ನೀಡಿರುವ ಸಮಜಾಯಿಷಿ ಸರಿಯಿಲ್ಲ. 15 ದಿನ ಅಕ್ಕಿ ಇಲ್ಲದಿದ್ದರೂ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿಲ್ಲ. ಪಿಎಂ ಪೋಷಣ್ ಶಕ್ತಿ ಯೋಜನೆ ಜಾರಿಯಲ್ಲಿ ಕರ್ತವ್ಯಲೋಪ ಹಿನ್ನೆಲೆ ಮುಖ್ಯೋಪಾಧ್ಯಾಯ ಮತ್ತು ಅಕ್ಷರದಾಸೋಹ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More