AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಧಗಧಗನೆ ಹೊತ್ತಿ ಉರಿದ ಕೆಎಸ್​ಆರ್​ಟಿಸಿ ಬಸ್, ಚಾಲಕನ ಸಮಯಪ್ರಜ್ಞೆಯಿಂದ 17 ಪ್ರಯಾಣಿಕರು ಜಸ್ಟ್ ಮಿಸ್

ಹಾವೇರಿ: ಧಗಧಗನೆ ಹೊತ್ತಿ ಉರಿದ ಕೆಎಸ್​ಆರ್​ಟಿಸಿ ಬಸ್, ಚಾಲಕನ ಸಮಯಪ್ರಜ್ಞೆಯಿಂದ 17 ಪ್ರಯಾಣಿಕರು ಜಸ್ಟ್ ಮಿಸ್

ಗಣಪತಿ ಶರ್ಮಾ
|

Updated on:May 05, 2026 | 9:09 AM

Share

ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡದ ಬಳಿ ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ಅಗ್ನಿ ಅವಘಡಕ್ಕೆ ತುತ್ತಾಗಿ ಸುಟ್ಟು ಭಸ್ಮವಾಗಿದೆ. ಚಾಲಕ ಪಕ್ಕೀರಪ್ಪನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಯಾಣಿಕರು ಜೀವ ಉಳಿಸಿದ ಚಾಲಕನಿಗೆ ಕೃತಜ್ಞತೆ ಅರ್ಪಿಸಿದ್ದಾರೆ. ಘಟನೆಯ ವಿಡಿಯೋ ಇಲ್ಲಿದೆ ನೋಡಿ.

ಹಾವೇರಿ, ಮೇ 5: ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಹೊತ್ತಿ ಉರಿದ ಭೀಕರ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಈ ಪಲ್ಲಕ್ಕಿ ಬಸ್ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ದೇವರಗುಡ್ಡದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಪಕ್ಕೀರಪ್ಪ, ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಯುವಂತೆ ಸೂಚಿಸಿದ್ದಾರೆ. ಚಾಲಕನ ಈ ಸಮಯಪ್ರಜ್ಞೆಯಿಂದಾಗಿ ಭಾರಿ ದುರಂತವೊಂದು ತಪ್ಪಿದೆ. ಬೆಂಕಿ ಕಾಣಿಸಿಕೊಂಡ ಕೆಲವೇ ನಿಮಿಷಗಳಲ್ಲಿ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಧಗಧಗನೆ ಉರಿಯಿತು. ಸಾರಿಗೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರಾದರೂ ಪ್ರಯೋಜನವಾಗಲಿಲ್ಲ. ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 05, 2026 09:08 AM
Follow Us