ಹಾವೇರಿಯಲ್ಲಿ ಭೀಕರ ದುರಂತ: ನಿಲ್ದಾಣದಲ್ಲಿದ್ದ ಜನರ ಮೇಲೆ ನುಗ್ಗಿದ ಬಸ್, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ವಿಡಿಯೋ

Updated on: Apr 01, 2026 | 12:41 PM

ಹಾವೇರಿ ಬಸ್ ನಿಲ್ದಾಣದಲ್ಲಿ ವೇಗವಾಗಿ ಬಂದ ಬಸ್ ಪ್ರಯಾಣಿಕರ ಮೇಲೆ ನುಗ್ಗಿದ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದಲ್ಲಿ 2 ವರ್ಷದ ಮಗು ಹಜರತ್ ಅಲಿ ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಚಾಲಕನ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸಿಸಿಟಿವಿ ವಿಡಿಯೋ ಇಲ್ಲಿದೆ.

ಹಾವೇರಿ, ಏಪ್ರಿಲ್ 1: ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಇಂದು (ಏಪ್ರಿಲ್ 1) ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದ್ದು, ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ.

ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಹಜರತ್ ಅಲಿಗೆ ತೀವ್ರವಾಗಿ ಗಾಯಗಳಾಗಿದ್ದು, ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಉಳಿದ ಗಾಯಾಳುಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಅಪಘಾತದ ಭೀಕರತೆಯನ್ನು ಸಾರಿ ಹೇಳುತ್ತಿವೆ. ಸಾರ್ವಜನಿಕರು ಚಾಲಕನ ಬೇಜವಾಬ್ದಾರಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ, ವಿಡಿಯೋ: ಅಣ್ಣಪ್ಪ ಬಾರ್ಕಿ, ಟಿವಿ9 ಹಾವೇರಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More