ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಗೃಹಿಣಿ ಸುನೀತಾ ದೊಡ್ಡಮನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮದುವೆಯಾಗಿ ಕೇವಲ 9 ತಿಂಗಳು, ಗರ್ಭಿಣಿಯಾಗಿದ್ದ ಸುನೀತಾಗೆ ಪತಿ ಗಿರೇಶ ದೊಡ್ಡಮನಿ ಹಾಗೂ ಕುಟುಂಬ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ನ್ಯಾಯಕ್ಕಾಗಿ ಸುನೀತಾ ಕುಟುಂಬಸ್ಥರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಪ್ರಕರಣ ದಾಖಲಾಗಿದೆ.
ಹಾವೇರಿ, ಜ.10: ಗಂಡನ ಮನೆಯಲ್ಲಿ ಅನುಮಾಸ್ಪದ ರೀತಿಯಲ್ಲಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಇದೀಗ ಮಗಳ ಸಾವಿನಿಂದ ತಾಯಿ ಗೋಳಾಡಿದ್ದಾರೆ. ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸುನೀತಾ ದೊಡ್ಡಮನಿ 35 ವರ್ಷದ ಗೃಹಿಣಿ ಎಂದು ಗುರುತಿಸಲಾಗಿದೆ. ಮದುವಯಾಗಿ ಕೇವಲ 9 ತಿಂಗಳ ಆಗಿತ್ತು. ಎರಡು ತಿಂಗಳ ಗರ್ಭಿಣಿಯಾಗಿದ್ದಳು ಎಂದು ಹೇಳಲಾಗಿದೆ. ವರದಕ್ಷಿಣೆ ತರುವಂತೆ ಪದೇ ಪದೇ ಗಂಡನ ಮನೆಯವರು ಕಿರುಕುಳ ನೀಡಿದರು. ಪತಿ ಗಿರೇಶ ದೊಡ್ಡಮನಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಎಂದು ಸುನೀತಾ ದೊಡ್ಡಮನಿ ಮನೆಯವರು ಆರೋಪಿಸಿದ್ದಾರೆ. ಶಿಗ್ಗಾಂವಿ ಪೊಲೀಸ್ ಠಾಣೆಯ ಮುಂದೆ ಆರೋಪಿಗಳ ಬಂಧನ ಮಾಡುವಂತೆ ಕುಟುಂಬದವರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಬಗ್ಗೆ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವರದಿ: ಅಣ್ಣಪ್ಪ ಬಾರ್ಕಿ
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

