ಹಾವೇರಿಯಲ್ಲಿ ಸಿನಿಮೀಯ ಶೈಲಿಯಲ್ಲಿ ಕಳ್ಳತನ: ತಿಜೋರಿ ಸಮೇತ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಚಿಕ್ಕಾಂಶಿ ಹೊಸೂರಿನ ಶಾರದಾ ಜ್ಯುವೆಲರ್ಸ್‌ನಲ್ಲಿ ಸುಮಾರು 70-80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದರೋಡೆಯಾಗಿದೆ. ಕೇವಲ 45 ನಿಮಿಷಗಳಲ್ಲಿ, ಮುಸುಕುಧಾರಿ ಖದೀಮರು 7 ಕ್ವಿಂಟಲ್ ಟಿಜೋರಿ ಸಮೇತ ಚಿನ್ನ ಮತ್ತು ಬೆಳ್ಳಿ ಕದ್ದು ಪರಾರಿಯಾಗಿದ್ದಾರೆ. ಈ ಇಡೀ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹಾನಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಹಾವೇರಿ, ಮೇ 16: ಜಿಲ್ಲೆಯ ಹಾನಗಲ್ ತಾಲ್ಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿ ಜ್ಯುವೆಲರಿ ಅಂಗಡಿಯೊಂದರಲ್ಲಿ ಕಳ್ಳತನ ನಡೆದಿದೆ. ಸಿನಿಮೀಯ ರೀತಿಯಲ್ಲಿ ಕೇವಲ 45 ನಿಮಿಷಗಳಲ್ಲಿ ಖದೀಮರ ಗ್ಯಾಂಗ್ ಸುಮಾರು 70 ರಿಂದ 80 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದೆ. ಅಣ್ಣಪ್ಪ ಭಜಂತ್ರಿ ಎಂಬುವರಿಗೆ ಸೇರಿದ ಶಾರದಾ ಜ್ಯುವೆಲರಿ ಶಾಪ್ನಲ್ಲಿ ಈ ಕೃತ್ಯ ನಡೆದಿದೆ. ಮುಖಕ್ಕೆ ಮಾಸ್ಕ್ ಹಾಗೂ ಕೈಗೆ ಗ್ಲೌಸ್ ಧರಿಸಿ ಬಂದಿದ್ದ ಕಳ್ಳರು, ಅಂಗಡಿಯ ಬೀಗ ಮುರಿದು ಒಳನುಗ್ಗಿದ್ದಾರೆ. ಬಳಿಕ 7 ಕ್ವಿಂಟಲ್ ತೂಕದ ತಿಜೋರಿ ಸಮೇತ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ. ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಈ ಹಿಂದೆ ಎರಡು ಭಾರಿ ಕೂಡ ಶಾರದಾ ಜ್ಯುವೆಲರಿ ಶಾಪ್ನಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿತ್ತು. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಅಣ್ಣಪ್ಪ ಬಾರ್ಕಿ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us