ಹಾವೇರಿಯ ರೈತನ ಜಮೀನಿನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ; ಸಿಸಿ ಕ್ಯಾಮೆರಾ ದೃಶ್ಯ ಇಲ್ಲಿದೆ ನೋಡಿ
ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ಮತ್ತೆ ಚಿರತೆ ಸಂಚಲನ ಕಂಡುಬಂದಿದೆ. ಶಂಕರಗೌಡ ಶಿರಗಂಬಿ ಅವರ ತೋಟದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಶಂಕರಗೌಡರ ತೋಟದಲ್ಲಿ ಇದು ಮೂರನೇ ಬಾರಿಗೆ ಚಿರತೆ ಕಾಣಿಸಿಕೊಂಡಿದ್ದು, ಕಳೆದ ವರ್ಷವೂ ಇದೇ ತೋಟದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಈ ವರ್ಷ ಈಗಾಗಲೇ ಎರಡನೇ ಬಾರಿಗೆ ಬೆಳಗಿನ ಜಾವ ತೋಟದ ಮನೆ ಮುಂದೆ ಚಿರತೆ ಸಂಚರಿಸಿದ್ದು, ರೈತ ಕುಟುಂಬ ಹಾಗೂ ಗ್ರಾಮಸ್ಥರು ಭೀತಿಯಲ್ಲಿದ್ದಾರೆ. ಚಿರತೆ ಸೆರೆಹಿಡಿಯಲು ಕ್ರಮ ಕೈಗೊಳ್ಳದ ಅರಣ್ಯ ಇಲಾಖೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿ, ನವೆಂಬರ್ 27: ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ಮತ್ತೆ ಚಿರತೆ ಸಂಚಲನ ಕಂಡುಬಂದಿದೆ. ಶಂಕರಗೌಡ ಶಿರಗಂಬಿ ಅವರ ತೋಟದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಶಂಕರಗೌಡರ ತೋಟದಲ್ಲಿ ಇದು ಮೂರನೇ ಬಾರಿಗೆ ಚಿರತೆ ಕಾಣಿಸಿಕೊಂಡಿದ್ದು, ಕಳೆದ ವರ್ಷವೂ ಇದೇ ತೋಟದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಈ ವರ್ಷ ಈಗಾಗಲೇ ಎರಡನೇ ಬಾರಿಗೆ ಬೆಳಗಿನ ಜಾವ ತೋಟದ ಮನೆ ಮುಂದೆ ಚಿರತೆ ಸಂಚರಿಸಿದ್ದು, ರೈತ ಕುಟುಂಬ ಹಾಗೂ ಗ್ರಾಮಸ್ಥರು ಭೀತಿಯಲ್ಲಿದ್ದಾರೆ. ಚಿರತೆ ಸೆರೆಹಿಡಿಯಲು ಕ್ರಮ ಕೈಗೊಳ್ಳದ ಅರಣ್ಯ ಇಲಾಖೆಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.