ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು: ವಿಗ್ರಹದ ಮೇಲೆ ಇಷ್ಟ್ಯಾಕೆ ದ್ವೇಷ?
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದಲ್ಲಿ ಮಾಲತೇಶ ದೇವರ ಮೂರ್ತಿಯನ್ನು ಕಿಡಿಗೇಡಿಗಳು ಕಲ್ಲಿನಿಂದ ಜಜ್ಜಿ ಭಗ್ನಗೊಳಿಸಿದ್ದಾರೆ. ದೇವರ ಮೂರ್ತಿಯ ಮುಖ ಮತ್ತು ಕಣ್ಣುಗಳಿಗೆ ಹಾನಿ ಮಾಡಲಾಗಿದೆ. ಈ ಘಟನೆಯಿಂದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದುಷ್ಕರ್ಮಿಗಳ ವಿರುದ್ಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ, ಡಿಸೆಂಬರ್ 19: ಕಲ್ಲಿನಿಂದ ಜಜ್ಜಿ ಮಾಲತೇಶ ದೇವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವಂತಹ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಮಾಲತೇಶ ದೇವರ ಮೂರ್ತಿಯ ಮುಖ ಮತ್ತು ಕಣ್ಣಿನ ಭಾಗಕ್ಕೆ ಕಲ್ಲಿನಿಂದ ಜಜ್ಜಲಾಗಿದೆ. ಸದ್ಯ ದುಷ್ಕರ್ಮಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಅಣ್ಣಪ್ಪ ಬಾರ್ಕಿ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 19, 2025 03:39 PM