ಸುಂಟರಗಾಳಿಗೆ ಕುಸಿದ ಪೆಂಡಾಲ್: ಕೂದಲೆಳೆ ಅಂತರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪಾರು
ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಿಂದ ಸಚಿವ ಸತೀಶ್ ಜಾರಕಿಹೊಳಿ ನಿರ್ಗಮಿಸುವಾಗ ಭಾರಿ ಧೂಳು ಮಿಶ್ರಿತ ಸುಂಟರಗಾಳಿಗೆ ಬೃಹತ್ ಪೆಂಡಾಲ್ ಕುಸಿದಿದೆ. ಕೂದಲೆಳೆ ಅಂತರದಲ್ಲಿ ಜಾರಕಿಹೊಳಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ಘಟನೆ ನಡೆದಿದೆ. ಪೆಂಡಾಲ್ ಕುಸಿತದ ವಿಡಿಯೋ ನೋಡಿ.
ಹಾವೇರಿ, ಜನವರಿ 03: ಏಕಾಏಕಿ ಜೋರಾಗಿ ಬೀಸಿದ ಸುಂಟರಗಾಳಿಗೆ ಪೆಂಡಾಲ್ ಕುಸಿದಿದ್ದು, ಸಚಿವ ಸತೀಶ್ ಜಾರಕಿಹೊಳಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ನಡೆದಿದೆ. ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮ ಹಿನ್ನೆಲೆ ಪೆಂಡಾಲ್ ಹಾಕಲಾಗಿತ್ತು. ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಮುಗಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಿದ್ದರು. ಈ ವೇಳೆ ಬೀಸಿದ ಸುಂಟರಗಾಳಿಗೆ ಸತೀಶ್ ಜಾರಕಿಹೊಳಿ ಹಿಂದೆ ಇದ್ದ ಪೆಂಡಾಲ್ ಹಾರಿ ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಜಾರಕಿಹೊಳಿ ಸೇರಿದಂತೆ ಕ್ಷಣ ಕಾಲ ಎಲ್ಲರೂ ವಿಚಲಿತಗೊಂಡರು.
ವರದಿ: ಅಣ್ಣಪ್ಪ ಬಾರ್ಕಿ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

