AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಗ್ಗಾಂವಿ ಆಂಜನೇಯ, ಬನ್ನಿ ಮಹಾಕಾಳಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ

ಶಿಗ್ಗಾಂವಿ ಆಂಜನೇಯ, ಬನ್ನಿ ಮಹಾಕಾಳಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ

ಗಣಪತಿ ಶರ್ಮಾ
|

Updated on: Aug 21, 2026 | 8:05 AM

Share

Haveri News: ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ಆಂಜನೇಯ ಮತ್ತು ಬನ್ನಿ ಮಹಾಕಾಳಿ ದೇವಾಲಯದ ಆವರಣದಲ್ಲಿ ಯುವಕನೊಬ್ಬ ಮೂತ್ರ ವಿಸರ್ಜಿಸಿದ್ದಾನೆ. ಇದನ್ನು ಪ್ರಶ್ನಿಸಿದ ಸ್ಥಳೀಯರೊಂದಿಗೆ ಆತ ಅಸಭ್ಯವಾಗಿ ವರ್ತಿಸಿದ್ದಾನೆ. ಬಳಿಕ ಸ್ಥಳೀಯರು ಆತನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆತನ ವಿರುದ್ಧ ಕಾನೂನು ಕ್ರಮಕ್ಕೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಹಾವೇರಿ, ಆಗಸ್ಟ್ 21: ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿರುವ ಆಂಜನೇಯ ಮತ್ತು ಬನ್ನಿ ಮಹಾಕಾಳಿ ದೇವಾಲಯದ ಆವರಣದಲ್ಲಿ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದಾನೆ. ಜಾಫರ್ ಎಂಬ ಹೆಸರಿನ ಈ ಯುವಕನ ಕೃತ್ಯವನ್ನು ಗಮನಿಸಿದ ಸ್ಥಳೀಯರು ಕೂಡಲೇ ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ದೇಗುಲದ ಪಾವಿತ್ರ್ಯತೆಯನ್ನು ಭಂಗಗೊಳಿಸಿದ ಈ ಕೃತ್ಯವನ್ನು ಪ್ರಶ್ನಿಸಿದಾಗ, ಯುವಕ ಸ್ಥಳೀಯರೊಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ಆಕ್ರೋಶಗೊಂಡ ಜನರು ಯುವಕನನ್ನು ಥಳಿಸಿ, ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪೊಲೀಸರು ಯುವಕ ಜಾಫರ್‌ನನ್ನು ವಶಕ್ಕೆ ಪಡೆದುಕೊಂಡಿದ್ದು, ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸ್ಥಳೀಯರು ಮತ್ತು ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ. ದೇವಸ್ಥಾನದ ಆವರಣದಲ್ಲಿ ಇಂತಹ ಕೃತ್ಯ ನಡೆಸಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ, ಟಿವಿ9, ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us