ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!: ರಸ್ತೆ ದುಃಸ್ಥಿಗೆ ಜನ ಹೈರಾಣು

Updated on: Feb 27, 2026 | 12:15 PM

ಹಾವೇರಿ-ಶಿರಸಿ ರಾಜ್ಯ ಹೆದ್ದಾರಿಯ ದುಸ್ಥಿತಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೂರು ವರ್ಷಗಳಿಂದ ನಿರ್ಮಾಣ ಹಂತದಲ್ಲಿರುವ ಈ ರಸ್ತೆ ಮತ್ತಷ್ಟು ಹದಗೆಟ್ಟು ಜೀವಭಯ ಸೃಷ್ಟಿಸಿದೆ. ಶಿರಸಿಯ ಮಾರಿಕಾಂಬಾ ಜಾತ್ರೆಗೆ ತೆರಳುವ ಭಕ್ತರು ಪ್ರತಿನಿತ್ಯ ಈ ಮಣ್ಣಿನ ರಸ್ತೆಯಲ್ಲಿ ಪರದಾಡುತ್ತಿದ್ದು,  ಸಂಸದರು ಮತ್ತು ಸರ್ಕಾರದ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾವೇರಿ, ಫೆಬ್ರವರಿ 27: ಜಿಲ್ಲೆಯಿಂದ ಶಿರಸಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟ ಪರಿಣಾಮ ದಕ್ಷಿಣ ಭಾರತದಲ್ಲಿಯೇ ಪ್ರಸಿದ್ಧಿ ಪಡೆದ ಶಿರಸಿಯ ಮಾರಿಕಾಂಬಾ ಜಾತ್ರೆಗೆ ತೆರಳುವ ಭಕ್ತರು ಪ್ರತಿನಿತ್ಯ ಪರದಾಟ ನಡೆಸಬೇಕಾದ ಸ್ಥಿತಿ ಉದ್ಭವವಾಗಿದೆ. ಕಳೆದ ಮೂರು ವರ್ಷಗಳಿಂದ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು, ಹಾವೇರಿ ಜಿಲ್ಲೆಯ ಗಡಿ ದಾಟುತ್ತಿದ್ದಂತೆ 20 ಕಿಲೋ ಮೀಟರ್ ರಸ್ತೆಯಲ್ಲಿ ಜೀವದ ಹಂಗು ತೊರೆದು ವಾಹನ ಸವಾರರು ಸಂಚರಿಸಬೇಕಿದೆ. ಅಕಾಲಿಕವಾಗಿ ಸುರಿದ ಅ್ಪ ಮಳೆಗೇ ರಸ್ತೆ ಕೆಸರು ಗದ್ದೆಯಂತಾಗಿದ್ದು, ಬೈಕ್​​ ಸವಾರರು ಬಿದ್ದು ಒದ್ದಾಡಿರು ಪ್ರಸಂಗಗಳೂ ನಡೆದಿವೆ. ಈ ರಸ್ತೆಯಲ್ಲಿ ಸುಗಮವಾಗಿ ಸಂಚರಿಸಲು ಸಾಧ್ಯವಾಗದೆ, ಕೆಸರಲ್ಲಿ ಸಿಲುಕಿ ವಾಯನಗಳು ನಿಯಂತ್ರಣ ಕಳೆದುಕೊಂಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲಲ್ಲಿ ವೈರಲ್​​ ಆಗುತ್ತಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More