ಟಾಟಾ ಏಸ್, ಕಾರಿನ ನಡುವೆ ಭೀಕರ ಅಪಘಾತ: ಮೂವರ ಸ್ಥಿತಿ ಗಂಭೀರ

Updated on: Apr 08, 2026 | 5:02 PM

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಕ್ರಾಸ್ ಬಳಿ ಟಾಟಾ ಏಸ್ ವಾಹನ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮದುವೆ ಸಮಾರಂಭದ ಅಡುಗೆ ಮಾಡಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಹಾವೇರಿ, ಏಪ್ರಿಲ್​​ 08: ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಾಟಾ ಏಸ್ ವಾಹನ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅರೇಮಲ್ಲಾಪುರ ಗ್ರಾಮದಿಂದ ಹಾನಗಲ್ ಕಡೆಗೆ ಮದುವೆ ಸಮಾರಂಭದ ಅಡುಗೆ ಮಾಡಲು ತೆರಳುತ್ತಿದ್ದ ಟಾಟಾ ಏಸ್ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 08, 2026 04:59 PM
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More