ಕೆಆರ್ಎಸ್ ಡ್ಯಾಂ ಅಡಿಗಲ್ಲು ವಿವಾದ: ಹಾಗೆ ಹೇಳೇ ಇಲ್ಲವೆಂದ ಹೆಚ್ಸಿ ಮಹದೇವಪ್ಪ
ಕೆಆರ್ಎಸ್ ಡ್ಯಾಂ ಅಡಿಗಲ್ಲು ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್ಸಿ ಮಹದೇವಪ್ಪ ಈಗ ಯೂಟರ್ನ್ ತೆಗೆದುಕೊಂಡಿದ್ದಾರೆ. ಕೆಆರ್ಎಸ್ ಡ್ಯಾಂ ಅನ್ನು ಟಿಪ್ಪು ಸುಲ್ತಾನ್ ಕಟ್ಟಿಸಿದ್ದಾರೆ ಎಂದು ಹೇಳಿಲ್ಲ ಎಂದ ಅವರು, ಅಡಿಗಲ್ಲಿನ ವಿಚಾರವಾಗಿ ನೀಡಿದ್ದ ಹೇಳಿಕೆ ಬಗ್ಗೆ ಮಾತನಾಡಲೇ ಇಲ್ಲ! ವಿಡಿಯೋ ಇಲ್ಲಿದೆ ನೋಡಿ.
ಬೆಂಗಳೂರು, ಆಗಸ್ಟ್ 4: ಕೆಆರ್ಎಸ್ ಡ್ಯಾಂ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ಹೇಳಿದ್ದ ಸಚಿವ ಡಾ. ಹೆಚ್ಸಿ ಮಹದೇವಪ್ಪ ಇದೀಗ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿದ್ದಾರೆ. ಕೆಆರ್ಎಸ್ ಡ್ಯಾಂ ಅನ್ನು ಟಿಪ್ಪು ಸುಲ್ತಾನ್ ಕಟ್ಟಿದ್ದಾರೆ ಎಂದು ನಾನು ಹೇಳಿಯೇ ಇಲ್ಲ, ಹಾಗೆ ಹೇಳಲು ಬರುವುದೂ ಇಲ್ಲ. ನಿಜವಾಗಿ ಕಟ್ಟಿದವರು ನಾಲ್ವಡಿ ಕೃಷ್ಣರಾಜ ಒಡೆಯರು ಎಂದಿದ್ದಾರೆ. ಮಹದೇವಪ್ಪ ಹೇಳಿಕೆಯ ವಿವರಗಳಿಗೆ ವಿಡಿಯೋ ನೋಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

