ಕೆಆರ್​ಎಸ್ ಡ್ಯಾಂ ಅಡಿಗಲ್ಲು ವಿವಾದ: ಹಾಗೆ ಹೇಳೇ ಇಲ್ಲವೆಂದ ಹೆಚ್​ಸಿ ಮಹದೇವಪ್ಪ

Updated on: Aug 04, 2025 | 12:59 PM

ಕೆಆರ್​ಎಸ್ ಡ್ಯಾಂ ಅಡಿಗಲ್ಲು ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಈಗ ಯೂಟರ್ನ್ ತೆಗೆದುಕೊಂಡಿದ್ದಾರೆ. ಕೆಆರ್​ಎಸ್ ಡ್ಯಾಂ ಅನ್ನು ಟಿಪ್ಪು ಸುಲ್ತಾನ್ ಕಟ್ಟಿಸಿದ್ದಾರೆ ಎಂದು ಹೇಳಿಲ್ಲ ಎಂದ ಅವರು, ಅಡಿಗಲ್ಲಿನ ವಿಚಾರವಾಗಿ ನೀಡಿದ್ದ ಹೇಳಿಕೆ ಬಗ್ಗೆ ಮಾತನಾಡಲೇ ಇಲ್ಲ! ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಆಗಸ್ಟ್ 4: ಕೆಆರ್​ಎಸ್ ಡ್ಯಾಂ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ಹೇಳಿದ್ದ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಇದೀಗ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿದ್ದಾರೆ. ಕೆಆರ್​ಎಸ್ ಡ್ಯಾಂ ಅನ್ನು ಟಿಪ್ಪು ಸುಲ್ತಾನ್ ಕಟ್ಟಿದ್ದಾರೆ ಎಂದು ನಾನು ಹೇಳಿಯೇ ಇಲ್ಲ, ಹಾಗೆ ಹೇಳಲು ಬರುವುದೂ ಇಲ್ಲ. ನಿಜವಾಗಿ ಕಟ್ಟಿದವರು ನಾಲ್ವಡಿ ಕೃಷ್ಣರಾಜ ಒಡೆಯರು ಎಂದಿದ್ದಾರೆ. ಮಹದೇವಪ್ಪ ಹೇಳಿಕೆಯ ವಿವರಗಳಿಗೆ ವಿಡಿಯೋ ನೋಡಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ