ಬಳ್ಳಾರಿ ಗಲಭೆ: ಜನಾರ್ದನರೆಡ್ಡಿ, ಶ್ರೀರಾಮುಲುಗೆ ಫೋನ್ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿಯಲ್ಲಿ ಉದ್ವಿಗ್ನ ಪರಿಸ್ಥಿತಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಶಾಸಕ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲುಗೆ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ಘಟನೆಗಳ ಬಗ್ಗೆ ಮಾಹಿತಿ ಪಡೆದ ದೇವೇಗೌಡರು, ಆತಂಕದಲ್ಲಿರುವ ನಾಯಕರಿಗೆ ಸಾಂತ್ವನ ಹೇಳಿದ್ದಾರೆ. ನಿನ್ನೆ ಸಂಜೆ ಇಬ್ಬರು ನಾಯಕರೊಂದಿಗೆ ಮಾತನಾಡಿದ್ದಾರೆ.
ಬೆಂಗಳೂರು, ಜನವರಿ 03: ಬಳ್ಳಾರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಉಂಟಾದ ಉದ್ವಿಗ್ನ ಪರಿಸ್ಥಿತಿ ಮತ್ತು ಆತಂಕದ ವಾತಾವರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಶಾಸಕ ಜನಾರ್ದನ ರೆಡ್ಡಿ ಮತ್ತು ಬಿ. ಶ್ರೀರಾಮುಲುಗೆ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ನಿನ್ನೆ ಸಂಜೆ ದೇವೇಗೌಡರು ಇಬ್ಬರು ನಾಯಕರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
