HD Deve Gowda Health Update: ಹೆಚ್ಡಿ ದೇವೇಗೌಡ ಆರೋಗ್ಯದಲ್ಲಿ ಚೇತರಿಕೆ, ಕುಮಾರಸ್ವಾಮಿ ಮಾಹಿತಿ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದ್ದು, ಚೇತರಿಕೆ ಕಾಣಿಸಿಕೊಂಡಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಅವರ ಆರೋಗ್ಯದ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಮುಂದಿನ ಮೂರು-ನಾಲ್ಕು ದಿನಗಳಲ್ಲಿ ದೇವೇಗೌಡರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು, ಅಕ್ಟೋಬರ್ 10: ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಈ ವಿಷಯ ತಿಳಿಸಿದ್ದು, ದೇವೇಗೌಡರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ. ಮೂರು-ನಾಲ್ಕು ದಿನಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ. ವೈದ್ಯರ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.

