HD Deve Gowda Health Update: ಹೆಚ್​ಡಿ ದೇವೇಗೌಡ ಆರೋಗ್ಯದಲ್ಲಿ ಚೇತರಿಕೆ, ಕುಮಾರಸ್ವಾಮಿ ಮಾಹಿತಿ

Updated on: Oct 10, 2025 | 9:39 AM

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದ್ದು, ಚೇತರಿಕೆ ಕಾಣಿಸಿಕೊಂಡಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಅವರ ಆರೋಗ್ಯದ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಮುಂದಿನ ಮೂರು-ನಾಲ್ಕು ದಿನಗಳಲ್ಲಿ ದೇವೇಗೌಡರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು, ಅಕ್ಟೋಬರ್ 10: ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್​ನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಈ ವಿಷಯ ತಿಳಿಸಿದ್ದು, ದೇವೇಗೌಡರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಆತಂಕಪಡುವ ಅಗತ್ಯವಿಲ್ಲ. ಮೂರು-ನಾಲ್ಕು ದಿನಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ. ವೈದ್ಯರ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More