Video: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ: ಮೃತ ಪ್ರಭಾಕರ್ ಕುಟುಂಬದವರಿಗೆ ದೇವೇಗೌಡರ ಸಾಂತ್ವನ
ಹಾಸನದ ಮೊಸಳೆ ಹೊಸಳ್ಳಿ ಬಳಿ ಗಣಪತಿ ಮೆರವಣಿಗೆ ಮೇಲೆ ಲಾರಿ ನುಗ್ಗಿದ ಪರಿಣಾಮ 9 ಜನ ಪ್ರಾಣ ಕಳೆದುಕೊಂಡಿದ್ದರು.ಈ ಭೀಕರ ದುರಂತದಲ್ಲಿ ಸಾವನ್ನಪ್ಪಿದ ಪ್ರಭಾಕರ್ ಎಂಬುವವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಮಾಜಿ ಪ್ರಧಾನಿ, ಸಂಸದ ದೇವೇಗೌಡರು ಸಾಂತ್ವನ ಹೇಳಿದರು.ಅವರು ಕುಟುಂಬಕ್ಕೆ ತಮ್ಮ ಸಹಾನುಭೂತಿಯನ್ನು ವ್ಯಕ್ತಪಡಿಸಿ, ಭವಿಷ್ಯದಲ್ಲಿ ಬೇಕಾಗುವ ಎಲ್ಲಾ ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆ.
ಹಾಸನ, ಸೆಪ್ಟೆಂಬರ್ 14: ಹಾಸನದ ಮೊಸಳೆ ಹೊಸಳ್ಳಿ ಬಳಿ ಗಣಪತಿ ಮೆರವಣಿಗೆ ಮೇಲೆ ಲಾರಿ ನುಗ್ಗಿದ ಪರಿಣಾಮ 9 ಜನ ಪ್ರಾಣ ಕಳೆದುಕೊಂಡಿದ್ದರು.ಈ ಭೀಕರ ದುರಂತದಲ್ಲಿ ಸಾವನ್ನಪ್ಪಿದ ಪ್ರಭಾಕರ್ ಎಂಬುವವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಮಾಜಿ ಪ್ರಧಾನಿ, ಸಂಸದ ಹೆಚ್ಡಿ ದೇವೇಗೌಡರು ಸಾಂತ್ವನ ಹೇಳಿದರು. ಅವರು ಕುಟುಂಬಕ್ಕೆ ತಮ್ಮ ಸಹಾನುಭೂತಿಯನ್ನು ವ್ಯಕ್ತಪಡಿಸಿ, ಭವಿಷ್ಯದಲ್ಲಿ ಬೇಕಾಗುವ ಎಲ್ಲಾ ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆ.
ಸರ್ಕಾರದಿಂದ ಕುಟುಂಬಕ್ಕೆ ಏಳು ಲಕ್ಷ ರೂಪಾಯಿಗಳ ಠೇವಣಿಯನ್ನು ಒದಗಿಸುವುದಾಗಿ ಘೋಷಿಸಲಾಗಿದೆ. ಈ ದುರಂತದಿಂದಾಗಿ ಸ್ಥಳೀಯರು ಆಘಾತಕ್ಕೀಡಾಗಿದ್ದಾರೆ. ಅಪಘಾತದ ಕಾರಣಗಳನ್ನು ತನಿಖೆ ಮಾಡಲಾಗುತ್ತಿದೆ. ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಗಣೇಶೋತ್ಸವದ ಸಮಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಿಂದಾಗಿ ಪ್ರಭಾಕರ್ ಎಂಬುವವರು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಹಲವಾರು ಜನರು ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಿಂದಾಗಿ ಊರಿನಾದ್ಯಂತ ದುಃಖದ ವಾತಾವರಣ ನಿರ್ಮಾಣವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

