ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಹೆಚ್​​ಡಿ ಕುಮಾರಸ್ವಾಮಿ

Edited By:

Updated on: Nov 13, 2026 | 2:58 PM

ಮುಖ್ಯಾಂಶಗಳು

  • ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕಂಚಿನ ಪ್ರತಿಮೆ ಅನಾವರಣ
  • ತುರುವೇಕೆರೆ ಕ್ಷೇತ್ರದ ಸಿ.ಎಸ್.ಪುರ ಗ್ರಾಮದಲ್ಲಿ ನಿರ್ಮಾಣ ಮಾಡಿರುವ ಪುತ್ಥಳಿ
  • ಪುತ್ಥಳಿ ಲೋಕಾರ್ಪಣೆ ಮಾಡಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ

ತುಮಕೂರು ಜಿಲ್ಲೆಯ ತುರುವೇಕೆರೆ ಕ್ಷೇತ್ರದ ಸಿ.ಎಸ್.ಪುರ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕಂಚಿನ ಪ್ರತಿಮೆ ಮತ್ತು ಸಮುದಾಯ ಭವನವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೋಕಾರ್ಪಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರು ಮತ್ತು ಮಾಜಿ ಶಾಸಕರು ಭಾಗವಹಿಸಿದ್ದರು. ದೇವೇಗೌಡರ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ಈ ನಿರ್ಮಾಣಗಳನ್ನು ಮಾಡಲಾಗಿದೆ.

ತುಮಕೂರು, ನವೆಂಬರ್​​ 13: ಜಿಲ್ಲೆಯ ತುರುವೇಕೆರೆ ಕ್ಷೇತ್ರದ ಸಿಎಸ್​ ಪುರ ಗ್ರಾಮದಲ್ಲಿ ನಿರ್ಮಿಸಲಾಗಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ಕಂಚಿನ ಪ್ರತಿಮೆಯನ್ನು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಶುಕ್ರವಾರ ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ದೇವೇಗೌಡ ಅವರ ಹೆಸರಿನಲ್ಲಿ ನಿರ್ಮಿಸಿರುವ ಸಮುದಾಯ ಭವನವನ್ನೂ ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ತುರುವೇಕೆರೆ ಶಾಸಕ ಎಂಟಿ ಕೃಷ್ಣಪ್ಪ ಹಾಗೂ ಮಾಜಿ ಶಾಸಕ ಮಸಾಲೆ ಜಯರಾಮ್ ಉಪಸ್ಥಿತರಿದ್ದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More