ದೆಹಲಿ ಮೆಟ್ರೋದಲ್ಲಿ ಹೆಚ್​ಡಿ ದೇವೇಗೌಡ ಪ್ರಯಾಣ: ಬಹುದಿನದ ಆಸೆ ನೆರವೇರಿತು ಎಂದ ಮಾಜಿ ಪ್ರಧಾನಿ

|

Updated on: Aug 04, 2024 | 9:07 PM

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಇಂದು ದೆಹಲಿ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ. ಈ ವೇಳೆ ಡಿಎಂಆರ್​ಸಿನಿರ್ದೇಶಕ ಮನೋಜ್ ಸಿಂಘಾಲ್ ಮತ್ತು ಇತರೆ ಸಿಬ್ಬಂದಿಗಳು ಸಾಥ್​ ನೀಡಿದ್ದಾರೆ. ಹಲವು ವರ್ಷಗಳಿಂದ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಬೇಕೆಂಬುದು ನನ್ನ ಆಸೆಯಾಗಿತ್ತು. ಅದು ಇಂದು ನೆರವೇರಿದೆ ಎಂದು ಹೇಳಿದ್ದಾರೆ.

ದೆಹಲಿ, ಆಗಸ್ಟ್​ 04: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (HD Deve Gowda) ಅವರು ಇತ್ತೀಚೆಗೆ ನವದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸಂಗ್ರಹಾಲಯಕ್ಕೆ ಭೇಟಿ ನೀಡಿದ್ದರು. ಇದೀಗ ಇಂದು ದೆಹಲಿ ಮೆಟ್ರೋದಲ್ಲಿ (delhi metro) ಪ್ರಯಾಣ ಮಾಡಿದ್ದಾರೆ. ಇದರ ವಿಡಿಯೋವನ್ನು ತಮ್ಮ ಟ್ವಿಟರ್​ ಹಂಚಿಕೊಂಡಿರುವ ಅವರು, ಹಲವು ವರ್ಷಗಳಿಂದ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಬೇಕೆಂಬುದು ನನ್ನ ಆಸೆಯಾಗಿತ್ತು. ಅದು ಇಂದು ನೆರವೇರಿದೆ. ನನ್ನ ಸಂಪುಟದಲ್ಲಿ ಮತ್ತು ಪ್ರತಿಪಕ್ಷಗಳ ಪ್ರತಿರೋಧದ ನಡುವೆಯೂ ನಾನು 1996ರಲ್ಲಿ ಪ್ರಧಾನಿಯಾಗಿದ್ದ ಈ ಯೋಜನೆಗೆ ಆರ್ಥಿಕ ಮುಚ್ಚುವಿಕೆಯನ್ನು ನೀಡಿದ್ದೆ. ಇದು ಜನರಿಗೆ ಸಹಾಯವಾಗಿದೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.