ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಈಗ ಹೇಗಿದೆ? ಮಣಿಪಾಲ್ ಆಸ್ಪತ್ರೆಯ ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
HD Deve Gowda wife Chennamma Health update: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ನಿನ್ನೆಗಿಂತ ಇಂದು ಸುಧಾರಣೆ ಕಂಡುಬಂದಿದ್ದು, ಉಸಿರಾಟದ ತೊಂದರೆ ಶೇ 20ರಿಂದ 30ರಷ್ಟು ಹತೋಟಿಗೆ ಬಂದಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ವೈದ್ಯರ ಹೇಳಿಕೆಯ ವಿಡಿಯೋ ಇಲ್ಲಿದೆ.
ಬೆಂಗಳೂರು, ಜುಲೈ 18: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಶುಕ್ರವಾರಕ್ಕಿಂತ ಇಂದು ಸುಧಾರಣೆ ಕಂಡುಬಂದಿದೆ ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ. ಸತ್ಯನಾರಾಯಣ ಶನಿವಾರ ಬೆಳಗ್ಗೆ ತಿಳಿಸಿದ್ದಾರೆ. ಉಸಿರಾಟದ ತೊಂದರೆ ಶೇ 20ರಿಂದ 30ರಷ್ಟು ಹತೋಟಿಗೆ ಬಂದಿದ್ದು, ರಕ್ತದೊತ್ತಡ ಸೇರಿದಂತೆ ಇತರ ಆರೋಗ್ಯದ ಮಾನದಂಡಗಳು ಸ್ಥಿರವಾಗಿವೆ ಎಂದು ಅವರು ಹೇಳಿದ್ದಾರೆ. ಸದ್ಯ ವೆಂಟಿಲೇಟರ್ ಅಗತ್ಯವಿಲ್ಲದೆ ಸಹಜ ಉಸಿರಾಟ ನಡೆಯುತ್ತಿದೆ. ಆದರೆ ಸಂಪೂರ್ಣ ಚೇತರಿಕೆಗೆ ಇನ್ನೂ ಸಮಯ ಬೇಕಾಗಲಿದ್ದು, ಮುಂದಿನ ದಿನಗಳಲ್ಲೂ ಚಿಕಿತ್ಸೆ ಮುಂದುವರಿಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
