“ಈ ದೇವೇಗೌಡ ಇನ್ನೂ ಬದುಕಿದ್ದಾನೆ”: ಅಕ್ಟೋಬರ್ 24ದಂದು ಸರ್ಕಾರಕ್ಕೆ ಸೂಕ್ತ ಉತ್ತರ ನೀಡುತ್ತೇನೆ
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಹಣವಿಲ್ಲ ಎಂದು ದೇವೇಗೌಡರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಾಸನದಲ್ಲಿ ಸಮಾವೇಶ ಮಾಡಿ ಉತ್ತರ ನೀಡಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಅನಧಿಕೃತ ಕೊಳಚೆ ಪ್ರದೇಶಗಳ ಸಂಖ್ಯೆ ಅಧಿಕವಾಗಿದೆ ಎಂದು ಹೇಳಿರುವ ದೇವೇಗೌಡರು, ವ್ಹೀಲ್ ಚೇರ್‌ನಲ್ಲಿ ಕುಳಿತುಕೊಂಡು ಅಂತಹ ಸ್ಥಳಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.
ಬೆಂಗಳೂರು, ಜ.3: ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸು ಕೊರತೆ ಎದುರಾಗಿದೆ ಎಂದು ತೀವ್ರವಾಗಿ ಟೀಕಿಸಿದ್ದಾರೆ. ಅವರು ಹಾಸನದಲ್ಲಿ ಅಕ್ಟೋಬರ್ 24ರಂದು ಸಮಾವೇಶ ನಡೆಸಿ ಸರ್ಕಾರಕ್ಕೆ ಸೂಕ್ತ ಉತ್ತರ ನೀಡುವುದಾಗಿ ಹೇಳಿದ್ದಾರೆ. ನೈಸ್ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ದೇವೇಗೌಡರು ಸ್ವಾಗತಿಸಿದ್ದಾರೆ. ಕೋಗಿಲು ಲೇಔಟ್‌ನಲ್ಲಿನ ಅಕ್ರಮ ಮನೆಗಳ ತೆರವು ಕುರಿತೂ ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ ಅನಧಿಕೃತ ಕೊಳಚೆ ಪ್ರದೇಶಗಳ ಸಂಖ್ಯೆ ಅಧಿಕವಾಗಿದೆ ಎಂದು ಹೇಳಿರುವ ದೇವೇಗೌಡರು, ವ್ಹೀಲ್ ಚೇರ್‌ನಲ್ಲಿ ಕುಳಿತುಕೊಂಡು ಅಂತಹ ಸ್ಥಳಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jan 03, 2026 08:50 AM