ಮಂಡ್ಯದಿಂದಲೇ ಸ್ಪರ್ಧಿಸುವ ಹಟಹಿಡಿದಿರುವ ಸುಮಲತಾ ಅಂಬರೀಶ್ ಆಪ್ತರನ್ನು ತಮ್ಮತ್ತ ಸೆಳೆಯುವ ಕೆಲಸ ಶುರುಮಾಡಿದ ದೇವೇಗೌಡ!

2023 ರ ವಿಧಾನಸಭಾ ಚುನಾವಣೆಯ ಬಳಿಕ 2024ರ ಲೋಕಸಭಾ ಚುನಾವಣೆಗಾಗಿ ಮಾಡಿಕೊಂಡಿರುವ ತಯಾರಿ ನೋಡಿ. ಮಗ ಹೆಚ್ ಡಿ ಕುಮಾರಸ್ವಾಮಿಯನ್ನು ಮುಂದೆ ಮಾಡಿ ತಾವು ಹಿಂದೆ ನಖಶಿಖಾಂತ ದ್ವೇಷಿಸುತ್ತಿದ್ದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿಯನ್ನು ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಸಲು ವೇದಿಕೆ ಸಜ್ಜು ಮಾಡುತ್ತಿದ್ದಾರೆ.

Follow us
|

Updated on: Feb 03, 2024 | 11:19 AM

ಮಂಡ್ಯ: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಪಕ್ಷದ ಪಿತಾಮಹ ಹೆಚ್ ಡಿ ದೇವೇಗೌಡ (HD Devegowda) ಚಾಣಾಕ್ಷ ರಾಜಕಾರಣಿ ಅನ್ನೋದರಲ್ಲಿ ಎರಡು ಮಾತಿಲ್ಲ. ರಾಜಕೀಯ ಚದುರಂಗದಾಟದ ಎಲ್ಲ ನಡೆಗಳು ಅವರಿಗೆ ಚೆನ್ನಾಗಿ ಗೊತ್ತು. ಯಾವ ನಡೆ ಯಾವ ಸಂದರ್ಭದಲ್ಲಿ ಆಡಬೇಕು ಅಂತ ಬೇರೆ ರಾಜಕಾರಣಿಗಳು ಅವರಿಂದ ಕಲಿಯಬೇಕು. ಮೊಮ್ಮಗನನ್ನು ಸಂಸದ ಮಾಡುವುದಕ್ಕಾಗಿ ಅವರು 2019ರ ಸಾರ್ವತ್ರಿಕ ಚುನಾವಣೆಯಲ್ಲಿ (2019 Lok Sabha polls) ಹಾಸನ ಬಿಟ್ಟುಕೊಟ್ಟು ತುಮಕೂರು ಕ್ಷೇತ್ರದಿಂದ (Tumakuru constituency) ಸ್ಪರ್ಧಿಸಿ ಸೋತಿದ್ದು ಬೇರೆ ವಿಚಾರ. 2023 ರ ವಿಧಾನಸಭಾ ಚುನಾವಣೆಯ ಬಳಿಕ 2024ರ ಲೋಕಸಭಾ ಚುನಾವಣೆಗಾಗಿ ಮಾಡಿಕೊಂಡಿರುವ ತಯಾರಿ ನೋಡಿ. ಮಗ ಹೆಚ್ ಡಿ ಕುಮಾರಸ್ವಾಮಿಯನ್ನು ಮುಂದೆ ಮಾಡಿ ತಾವು ಹಿಂದೆ ನಖಶಿಖಾಂತ ದ್ವೇಷಿಸುತ್ತಿದ್ದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿಯನ್ನು ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಸಲು ವೇದಿಕೆ ಸಜ್ಜು ಮಾಡುತ್ತಿದ್ದಾರೆ.

ಅವರಿಗಿರುವ ದೊಡ್ಡ ಹರ್ಡಲ್ ಅಂದರೆ, ಸುಮಲತಾ ಅಂಬರೀಶ್. ಬಿಜೆಪಿ ಟಿಕೆಟ್ ನೀಡದಿದ್ದರೂ ಮಂಡ್ಯದಿಂದಲೇ ಸ್ಪರ್ಧಿಸುವುದಾಗಿ ಹಾಲಿ ಸಂಸದೆ ಪಟ್ಟುಹಿಡಿದಿರುವ ಹಿನ್ನೆಲೆಯಲ್ಲಿ ಅವರ ಆಪ್ತರನ್ನು ತಮ್ಮತ್ತ ಸೆಳೆದುಕೊಳ್ಳುವ ಪ್ರಯತ್ನ ದೇವೇಗೌಡರು ಮಾಡುತ್ತಿದ್ದಾರೆ. ಮಂಡ್ಯದಲ್ಲಿ ನಡೆದ ಸಭೆಯೊಂದರಲ್ಲಿ ಸುಮಲತಾ ಆಪ್ತ ಇಂಡವಾಳು ಸಚ್ಚಿದಾನಂದರನ್ನು ಹೊಗಳಿ ತಮ್ಮೆಡೆ ವಾಲುವಂತೆ ಮಾಡುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ