ಮಂಡ್ಯ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟು ಕೊಡ್ತೀರಾ ಅಂತ ಕೇಳಿದ್ದಕ್ಕೆ ಹೆಚ್ ಡಿ ದೇವೇಗೌಡ ಸಮಂಜಸ ಪ್ರತಿಕ್ರಿಯೆ ನೀಡಲಿಲ್ಲ
ರಾಜ್ಯದಲ್ಲಿ ಈಗ 26 ಸ್ಥಾನಗಳಲ್ಲಿ ಬಿಜೆಪಿ ಸಂಸದರಿದ್ದಾರೆ, ಹಾಸನ ಮತ್ತು ರಾಮನಗರದದಲ್ಲಿ ಮಾತ್ರ ಜೆಡಿಎಸ್ ಮತ್ತು ಕಾಂಗ್ರೆಸ್ ಸಂಸದರಿದ್ದಾರೆ. ಈ ಸಲ ಎಲ್ಲ 28 ಕ್ಷೇತ್ರಗಳನ್ನು ಗೆಲ್ಲೋದಾಗಿ ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿಯ ಬಲಾಢ್ಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಗುರಿಯಾಗಿದೆ ಎಂದು ದೇವೇಗೌಡ ಹೇಳಿದರು.
ಮಂಗಳೂರು: ಧರ್ಮಪತ್ನಿ ಚೆನ್ನಮ್ಮ ಅವರೊಂದಿಗೆ ಇಂದು ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ (Kukke Subrahmanya) ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ (HD Devegowda) ಅವರು, ತಮ್ಮ ಪಕ್ಷ ಲೋಕಸಭಾ ಚುನಾವಣೆಗಾಗಿ ಬಿಜೆpi ಜೊತೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಭದ್ರಕೋಟೆ ಎನಿಸಿರುವ ಮಂಡ್ಯ ಕ್ಷೇತ್ರವನ್ನು ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ಬಿಟ್ಟಿಕೊಡುವರೇ ಅಂತ ಕೇಳಿದಾಗ ಕೊಂಚ ಸಿಡಿಮಿಡಿಗೊಂಡರು. ಸೀಟು ಹೊಂದಾಣಿಕೆ ಬಗ್ಗೆ ಇನ್ನೂ ಯಾವುದೇ ಮಾತುಕತೆಯಾಗಿಲ್ಲ, ಈಗಲೇ ಹೇಗೆ ಹೇಳೋದು ಅಂತ ಅವರು ಹೇಳಿದರು. ರಾಜ್ಯದಲ್ಲಿ ಈಗ 26 ಸ್ಥಾನಗಳಲ್ಲಿ ಬಿಜೆಪಿ ಸಂಸದರಿದ್ದಾರೆ, ಹಾಸನ ಮತ್ತು ರಾಮನಗರದದಲ್ಲಿ ಮಾತ್ರ ಜೆಡಿಎಸ್ ಮತ್ತು ಕಾಂಗ್ರೆಸ್ ಸಂಸದರಿದ್ದಾರೆ. ಈ ಸಲ ಎಲ್ಲ 28 ಕ್ಷೇತ್ರಗಳನ್ನು ಗೆಲ್ಲೋದಾಗಿ ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿಯ ಬಲಾಢ್ಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಗುರಿಯಾಗಿದೆ ಎಂದು ದೇವೇಗೌಡ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ