‘ಗೃಹ ಸಚಿವರೇ ನಿಮ್ಮದೇ ಇದು’: ವಿಡಿಯೋ ಪ್ರದರ್ಶಿಸಿ ಕುಮಾರಸ್ವಾಮಿ ಗಂಭೀರ ಆರೋಪ!

Edited By:

Updated on: Oct 16, 2026 | 1:21 PM

HD Kumaraswamy on Sting Operation: ಸ್ಟಿಂಗ್ ಕಾರ್ಯಾಚರಣೆ ವಿವಾದದ ಮಧ್ಯೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಪರವಾಗಿ ಹೋರಾಟ ಮಾಡುವವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳುವುದಿಲ್ಲ ಎಂಬ ಖರ್ಗೆ ಹೇಳಿಕೆಯನ್ನು ಕುಮಾರಸ್ವಾಮಿ ಟೀಕಿಸಿದ್ದಾರೆ. ರಾಜ್ಯದ ಹಣವನ್ನು ಲೂಟಿ ಮಾಡಿ ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್ 16: ಕರ್ನಾಟಕ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ ಸ್ಟಿಂಗ್ ಕಾರ್ಯಾಚರಣೆ ವಿವಾದದ ನಡುವೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಗಂಭೀರ ಆರೋಪವನ್ನೂ ಮಾಡಿದ್ದಾರೆ. ಇತ್ತೀಚೆಗೆ ವೈರಲ್ ಆಗಿರುವ ವಿಡಿಯೋವೊಂದನ್ನು ಪ್ರದರ್ಶಿಸಿ, ತಮ್ಮ ಪರವಾಗಿ ಹೋರಾಟ ನಡೆಸುವವರ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿರುವುದನ್ನು ಕುಮಾರಸ್ವಾಮಿ ಟೀಕಿಸಿದ್ದಾರೆ. ‘‘ನೀವೇನು ಬೇಕಾದರೂ ಗಲಾಟೆ ಮಾಡಿ, ನಿಮ್ಮ ಮೇಲೆ ನಾವೇನು ಪೊಲೀಸ್​ನವರು ಆ್ಯಕ್ಷನ್ ತಗೊಳ್ಳಲ್ಲ’’ ಎಂದು ಸಿಜೆಪಿ ಪರ ಖರ್ಗೆ ಹೇಳಿಕೆ ನೀಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಗೃಹ ಸಚಿವರ ಈ ಹೇಳಿಕೆಯು ಕಾನೂನು ಸುವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ‘‘ಅಪ್ಪಾ, ನಮ್ಮ ಗೃಹ ಸಚಿವರೇ, ನಿಮ್ಮ ಹೇಳಿಕೆ ಇದು’’ ಎಂದು ವಿಡಿಯೋ ಪ್ರದರ್ಶಿಸಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಅಲ್ಲದೆ, ‘ಕಾಂಗ್ರೆಸ್ ಮತ್ತು ಸಿಜೆಪಿ ಎರಡೂ ಒಂದೇ’ ಎಂದು ಗೃಹ ಸಚಿವರೇ ಹೇಳಿದ್ದಾರೆ ಎಂದ ಅವರು, ಸಿಜೆಪಿ ಚಟುವಟಿಕೆಗಳಿಗೆ ಫಂಡ್ಸ್ ಎಲ್ಲಾ ಇಲ್ಲಿಂದಲೇ ಹೋಗ್ತಾ ಇದೆ. ನಮ್ಮ ರಾಜ್ಯದ ಹಣವನ್ನ ಲೂಟಿ ಮಾಡಿ, ಅಲ್ಲಿ ದೇಶದ ಅಭದ್ರತೆಯನ್ನ ಉಂಟುಮಾಡಲು ರವಾನಿಸಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 16, 2026 01:07 PM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More