ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿ.ಕೆ. ಶಿವಕುಮಾರ್ ಸ್ಟಿಂಗ್ ಆಪರೇಷನ್ ಮಾಡಿದ್ದರು: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

Updated on: Oct 07, 2026 | 2:29 PM

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಸಚಿವರ ಮೇಲೆ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ ಎಂದು ಎಚ್ಚರಿಸಿರುವ ವಿಚಾರವಾಗಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸುವ ಮೂಲಕ ಸಿಎಂ ಆದರು. ಈಗ ತಮ್ಮ ಸಂಪುಟ ಸಹೋದ್ಯೋಗಿಗಳನ್ನು ನಿಯಂತ್ರಿಸಲು ಅದೇ ತಂತ್ರ ಬಳಸುತ್ತಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 07: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಸಂಪುಟ ಸಚಿವರ ಮೇಲೆ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ ಎಂದು ಎಚ್ಚರಿಕೆ ನೀಡಿದ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸುವ ಮೂಲಕವೇ ಮುಖ್ಯಮಂತ್ರಿಯಾದರು ಎಂದು ಕೆಲ ಕಾಂಗ್ರೆಸ್​​ ನಾಯಕರೇ ಮಾತನಾಡುತ್ತಿದ್ದಾರೆ. ಈಗ ಸಚಿವರನ್ನು ನಿಯಂತ್ರಿಸಲು ಡಿಕೆಶಿ ಅದೇ ತಂತ್ರ ಬಳಸುತ್ತಿದ್ದಾರೆ ಎಂದವರು ಗಂಭೀರ ಆರೋಪ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More