ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ 2028ರ ಚುನಾವಣೆಗೆ ಮಾಹಿತಿ ಸಂಗ್ರಹ: ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

Updated on: Jul 02, 2026 | 2:27 PM

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯ ಹಿಂದೆ 2028ರ ವಿಧಾನಸಭಾ ಚುನಾವಣೆಯ ಮಾಹಿತಿ ಸಂಗ್ರಹಿಸುವ ಹುನ್ನಾರವಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳಿಗೆ ಫೋಟೋ, ಮಾಹಿತಿ ಸಂಗ್ರಹದ ಮೂಲಕ ಮತದಾರರ ದತ್ತಾಂಶವನ್ನು ಬಳಸಿಕೊಳ್ಳಲಾಗುತ್ತಿದೆ. ಈ ಮೂಲಕ ಚುನಾವಣೆ ತಂತ್ರ ರೂಪಿಸಲಾಗುತ್ತಿದೆ ಎಂದು ಎಚ್‌ಡಿಕೆ ಟೀಕಿಸಿದ್ದಾರೆ.

ಬೆಂಗಳೂರು, ಜುಲೈ 2: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಕ್ರಿಯೆಯನ್ನು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ. ಗೃಹಜ್ಯೋತಿ, ಗೃಹಲಕ್ಷ್ಮಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪರಿಷ್ಕರಣೆ ಮತ್ತು ಮಾಹಿತಿ ಸಂಗ್ರಹವು 2028ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುವುದು ಮತ್ತು ರಾಜಕೀಯ ತಂತ್ರ ರೂಪಿಸುವುದಕ್ಕಾಗಿ ಎಂದು ಅವರು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಗೆ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುವುದು, ಹಾಗೂ ಗೃಹಲಕ್ಷ್ಮಿ, ಶಕ್ತಿ ಯೋಜನೆಗಳಿಗೆ ಫೋಟೋಗಳನ್ನು ಕಡ್ಡಾಯಗೊಳಿಸುವ ಮೂಲಕ, ಸರ್ಕಾರವು ಅಮಾಯಕ ಜನರಿಂದ ದತ್ತಾಂಶವನ್ನು ಸಂಗ್ರಹಿಸುತ್ತಿದೆ. ಈ ದತ್ತಾಂಶವನ್ನು ಮುಂಬರುವ 2028ರ ಚುನಾವಣಾ ತಂತ್ರಗಾರಿಕೆಗೆ ಬಳಸಿಕೊಳ್ಳಲು ಸಂಚು ರೂಪಿಸಿದೆ ಎಂದಿದ್ದಾರೆ.

ಅಲ್ಲದೆ, ಅರ್ಹ ಫಲಾನುಭವಿಗಳನ್ನು ಗುರುತಿಸುವ ನೆಪದಲ್ಲಿ, ಹಿಂದೆ ನೀಡಿದ ‘ಎಲ್ಲರಿಗೂ ಉಚಿತ’ ಎಂಬ ಭರವಸೆಯಿಂದ ಹಿಂದೆ ಸರಿದು, ಅನರ್ಹರ ಹೆಸರನ್ನು ಪಟ್ಟಿಯಿಂದ ಡಿಲೀಟ್ ಮಾಡಲಾಗುತ್ತಿದೆ. ಮೂರು ವರ್ಷಗಳ ಕಾಲ ಏನೂ ಮಾಡದ ಸರ್ಕಾರ ಈಗ ದಿಢೀರ್ ಪರಿಷ್ಕರಣೆಗೆ ಮುಂದಾಗಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More