ಹೆಚ್ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ, ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ರಾಜಕೀಯ ವಾಕ್ಸಮರ ತಾರಕಕ್ಕೇರಿದೆ. ಆಡಳಿತಾತ್ಮಕ ಅನುಭವ, ಸಿಡಿ ಫ್ಯಾಕ್ಟರಿ ಆರೋಪ ಮತ್ತು ಲೀಸ್ ಬೇಸ್ಡ್ ಸಿಎಂ ಹೇಳಿಕೆಗಳ ಸುತ್ತ ಸವಾಲುಗಳು ವಿನಿಮಯವಾಗಿವೆ. ತೆರೆದ ಚರ್ಚೆಗೆ ಪರಸ್ಪರ ಆಹ್ವಾನ ನೀಡುವ ಮೂಲಕ ರಾಜಕೀಯ ಅಖಾಡ ಮತ್ತಷ್ಟು ರಂಗೇರಿದೆ.
ಬೆಂಗಳೂರು, ಜ.10: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ಬಳ್ಳಾರಿ ಗಲಾಟೆ ವಿಚಾರದಿಂದ ಆರಂಭವಾದ ಈ ಸಮರ ಇದೀಗ ಅನುಭವದ ಕದನದ ಹಂತಕ್ಕೆ ತಲುಪಿದೆ. ಡಿಕೆ ಶಿವಕುಮಾರ್ ಅವರ ಅಧಿಕಾರದ ವ್ಯಾಪ್ತಿಯ ಬಗ್ಗೆ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಆಡಳಿತದಲ್ಲಿ ತಾನು ಕುಮಾರಸ್ವಾಮಿಗಿಂತ ಹೆಚ್ಚು ಅನುಭವಿ ಎಂದು ಹೇಳಿಕೊಂಡಿದ್ದಾರೆ ಮತ್ತು ಕುಮಾರಸ್ವಾಮಿಯವರಿಂದ ಕಲಿಯಲು ಏನೂ ಇಲ್ಲ ಎಂದಿದ್ದಾರೆ. ಅಲ್ಲದೆ, ವಿಧಾನಸಭೆಯಲ್ಲಿ ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ಸಿದ್ಧ ಎಂದು ಸವಾಲು ಹಾಕಿದ್ದಾರೆ. ಈ ಸವಾಲನ್ನು ಕುಮಾರಸ್ವಾಮಿ ಸ್ವೀಕರಿಸಿದ್ದಾರೆ. ಈ ಮಧ್ಯೆ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೀಸ್ ಬೇಸ್ಡ್ ಸಿಎಂ ಎಂದು ಕರೆದಿದ್ದು, ಇದಕ್ಕೆ ಸಿದ್ದರಾಮಯ್ಯ ಕೌಂಟರ್ ನೀಡಿದ್ದಾರೆ. ಸಿಡಿ ಫ್ಯಾಕ್ಟರಿ ಕುರಿತಾದ ಆರೋಪ-ಪ್ರತ್ಯಾರೋಪಗಳು ಸಹ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತುಪ್ಪ ಸುರಿದಿವೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

