AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ವೈರತ್ವ ಬಿಟ್ಟು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಕುಮಾರಸ್ವಾಮಿ, ಡಿಕೆ ಶಿವಕುಮಾರ್!

ರಾಜಕೀಯ ವೈರತ್ವ ಬಿಟ್ಟು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಕುಮಾರಸ್ವಾಮಿ, ಡಿಕೆ ಶಿವಕುಮಾರ್!

ಗಣಪತಿ ಶರ್ಮಾ
|

Updated on:Sep 20, 2025 | 12:08 PM

Share

ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಹೆಚ್​ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಶನಿವಾರ ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ ಸಭೆಯಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು. ರಾಜಕೀಯ ವೈರತ್ವ ಬದಿಗಿಟ್ಟು ಇಬ್ಬರೂ ನಿರ್ಮಲಾನಂದ ಶ್ರೀಗಳ ಅಕ್ಕಪಕ್ಕ ಕುಳಿತುಕೊಂಡರು. ವಿಡಿಯೋ ಇಲ್ಲಿದೆ.

ಬೆಂಗಳೂರು, ಸೆಪ್ಟೆಂಬರ್ 20: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜೋಡೆತ್ತುಗಳು ಎಂದೇ ಗುರುತಿಸಿಕೊಂಡವರು ಹೆಚ್​ಡಿ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್. ನಂತರ ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಜತೆ ಜೆಡಿಎಸ್ ಕೈಜೋಡಿಸಿದ್ದರಿಂದ ಕುಮಾರಸ್ವಾಮಿ ಕೇಂದ್ರ ಸಚಿವರಾದರು. ಡಿಕೆ ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾದರು. ಅಲ್ಲಿಂದ ಉಭಯ ನಾಯಕರ ನಡುವೆ ತೀವ್ರ ರಾಜಕೀಯ ವಾಕ್ಸಮರ, ಬದ್ಧ ರಾಜಕೀಯ ವೈರತ್ವ ಏರ್ಪಟ್ಟಿತ್ತು. ಇದೀಗ ಉಭಯ ನಾಯಕರು ರಾಜಕೀಯ ವೈರತ್ವ ಮರೆತು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ ಸಭೆಗೆ ಹಾಜರಾದ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್, ನಿರ್ಮಲಾನಂದ ಸ್ವಾಮೀಜಿ ಜತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 20, 2025 12:07 PM
Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More